ಬೆಂಗಳೂರು: ರಾಮನಗರ ವಿಧಾನಸಭಾ ಉಪಚುನಾವಣೆಯಲ್ಲಿ ಗೆದ್ದಿದ್ದ ಅನಿತಾ ಕುಮಾರಸ್ವಾಮಿಯವರು ಇಂದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಗೋಪಾಲಯ್ಯ ಸೇರಿದಂತೆ ಹಲವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
Advertisement
Advertisement
ಗುರುವಾರ ಮಧ್ಯಾಹ್ನ 3.23ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿತ್ತು. ಹೀಗಾಗಿ ಅನಿತಾ ಕುಮಾರಸ್ವಾಮಿ 25 ನಿಮಿಷ ಮುಂಚಿತವಾಗಿ ಸ್ಪೀಕರ್ ಕಚೇರಿಗೆ ಆಗಮಿಸಿದ್ದರು. ಸಮಯ 3.23 ಆಗುತ್ತಿದ್ದಂತೆ ಅನಿತಾ ಕುಮಾರಸ್ವಾಮಿ ಎದ್ದು ನಿಂತು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣ ವಚನ ನಡೆಯುವರೆಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಶಾಸಕರು, ನೂರಾರು ಬೆಂಬಲಿಗರ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಸುಮ್ಮನೆ ಕುಳಿತಿದ್ದರು.
Advertisement
Advertisement
ರಾಮನಗರ ಉಪಚುನಾವಣೆಯಲ್ಲಿ 1,09,137 ಮತಗಳ ಅಂತರದಿಂದ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಅನಿತಾ ಕುಮಾರಸ್ವಾಮಿ ಅವರು ಒಟ್ಟು 1,48,168 ಮತಗಳನ್ನು ಪಡೆದಿದ್ದರೆ, ಬಿಜೆಪಿ ಸೇರಿ ಬಳಿಕ ಮತ್ತೆ ಕಾಂಗ್ರೆಸ್ಸಿಗೆ ಮರಳಿದ ಎಲ್. ಚಂದ್ರಶೇಖರ್ 15,906 ಮತಗಳನ್ನು ಪಡೆದಿದ್ದರು.
ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಪತಿಯವರೇ ಮುಖ್ಯಮಂತ್ರಿ ಆಗಿದ್ದಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೇನೆ. ಮಂತ್ರಿಸ್ಥಾನ ನೀಡಿ ಎಂದು ಡಿಮ್ಯಾಂಡ್ ಮಾಡಲ್ಲ. ನಾನು ರಾಮನಗರದ ಮೊದಲ ಮಹಿಳಾ ಶಾಸಕಿಯಾಗಿದ್ದು ನನ್ನನ್ನು ಆಯ್ಕೆ ಮಾಡಿದ ಜನತೆಗೆ ಕೃತಜ್ಞತೆ ಹೇಳುತ್ತೇನೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews