ಮಂಡ್ಯ: ಲೋಕಸಭಾ ಚುನಾವಣೆಗೆ ಜೆಡಿಎಸ್ ನಿಂದ ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಇಂದು ಕೂಡ ಒಂದೂ ಕಾಲು ರೂ. ಹರಕೆಯ ಪೂಜೆಯನ್ನು ಮುಂದುವರಿಸಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಹೊರ ವಲಯದಲ್ಲಿರುವ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅನಿತಾ ಪೂಜೆ ಸಲ್ಲಿಸಲಿದ್ದಾರೆ. ನಿಖಿಲ್ಗೆ ಜೆಡಿಎಸ್ ಟಿಕೆಟ್ ಸಿಕ್ಕಿ, ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹರಕೆ ಹೊತ್ತಿದ್ದಾರೆ. ಇದನ್ನೂ ಓದಿ: ಮಗನ ಒಳಿತಿಗಾಗಿ ಒಂದು ಕಾಲು ರೂಪಾಯಿ ಹರಕೆ ಹೊತ್ತ ಅನಿತಾ ಕುಮಾರಸ್ವಾಮಿ!
ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಅನ್ನೋದು ವಾಡಿಕೆ ಇದೆ. ಹರಕೆ ಹೊತ್ತು 5 ಮಂಗಳವಾರ ಆಗಮಿಸಿ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ನೆರವೇರಲಿದೆ ಅನ್ನೋ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಇಂದು 3 ನೇ ಮಂಗಳವಾರದ ಕಾರಣ ಅನಿತಾ ಕುಮಾರಸ್ವಾಮಿ ಅವರು ಪೂಜೆಗೆ ಆಗಮಿಸಲಿದ್ದಾರೆ.
ಇತ್ತ ಇಂದೂ ಸಹ ಸುಮಲತಾ ಅಂಬರೀಶ್ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನಲ್ಲಿ ಪ್ರವಾಸ ಮಾಡಲಿದ್ದಾರೆ. ಅಷ್ಟೇ ಅಲ್ಲದೆ ಕೋಡಿಶೆಟ್ಟಿಪುರದ ಮಾರಮ್ಮನ ದೇವಾಲಯ ಪುನರ್ ಪ್ರತಿಷ್ಠಾಪನೆ ಹಾಗೂ ನವಗ್ರಹ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv