ರಾಮನಗರ: ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ಅನಿವಾರ್ಯವಾಗಿದ್ದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಇನ್ನಷ್ಟೇ ಹೊರಬೀಳಲಿದ್ದು, ಈ ಮೊದಲೇ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಗೆದ್ದಿದ್ದಾರೆ.
ಹೌದು. ನಗರದಲ್ಲಿ ಅನಿತಾ ಕುಮಾರಸ್ವಾಮಿ ನೂತನ ಶಾಸಕಿ ಅಂತಾ ಬ್ಯಾನರ್ ಗಳು ರಾರಾಜಿಸ್ತಿವೆ. ಕಾರ್ಯಕರ್ತರು ಮತ ಎಣಿಕೆಗೂ ಮುನ್ನವೇ ಅನಿತಾ ಕುಮಾರಸ್ವಾಮಿ ಅವರು ರಾಮನಗರದ ನೂತನ ಶಾಸಕಿ ಅಂತಾ ಬ್ಯಾನರ್ ಹಾಕಿದ್ದಾರೆ.
Advertisement
Advertisement
ಬೆಂಗಳೂರು ಟು ರಾಮನಗರ ರಸ್ತೆಯಲ್ಲಿ ಈ ಬ್ಯಾನರ್ ಗಳು ರಾರಾಜಿಸ್ತಿವೆ. ರಾಮನಗರ ನೂತನ ಶಾಸಕಿಯಾಗಿ ಆಯ್ಕೆಯಾಗಿರುವ ಅನಿತಾ ಕುಮಾರಸ್ವಾಮಿಗೆ ಅಭಿನಂದನೆಗಳು ಅಂತ ಬ್ಯಾನರ್ ನಲ್ಲಿ ಶುಭಾಶಯ ಕೋರಿದ್ದಾರೆ. ಈ ಮೂಲಕ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಯೇ ಗೆಲ್ಲೋದು ಅನ್ನೋ ವಿಶ್ವಾಸದಲ್ಲಿ ಕಾಯಕರ್ತರು ಈ ಬ್ಯಾನರ್ ಹಾಕಿದ್ದಾರೆ ಎನ್ನಲಾಗುತ್ತಿದೆ.
Advertisement
ರಾಮನಗರದಲ್ಲಿ ಉಪ ಸಮರ ರಂಗೇರುವ ಮುನ್ನವೇ ಬಿಜೆಪಿ ಅಭ್ಯರ್ಥಿ ಶಸ್ತ್ರತ್ಯಾಗ ಮಾಡಿದ್ರೆ, ಕಾಂಗ್ರೆಸ್‍ನಿಂದ ವಲಸೆ ಬಂದ ಮುಖಂಡನನ್ನೇ ಅಭ್ಯರ್ಥಿಯಾಗಿ ನಿಲ್ಲಿಸಿ ಟಾಂಗ್ ಕೊಟ್ಟಿದ್ದೇವೆ ಅಂತ ಬೀಗುತ್ತಿದ್ದ ಯಡಿಯೂರಪ್ಪ-ಯೋಗೇಶ್ವರ್ ದಂಡಿಗೆ ಮತದಾನಕ್ಕೆ ಎರಡು ದಿನಗಳ ಹಿಂದೆ ಗರ್ವಭಂಗ ಆಯ್ತು. ಡಿಕೆಶಿ ಬ್ರದರ್ಸ್ ಆಡಿದ ಕಡೇ ಕ್ಷಣದ ಆಟದಲ್ಲಿ ಎದುರಾಳಿಯೇ ಇಲ್ಲದೇ ರಾಮನಗರದಲ್ಲಿ ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿಯವ್ರದ್ದೇ ಆಟವಾಗಿ ಮಾರ್ಪಟ್ಟಿತ್ತು. ಪತಿ ಖಾಲಿ ಮಾಡಿದ್ದ ಕ್ಷೇತ್ರಕ್ಕೆ ಪತ್ನಿಯೇ ಅಧಿಪತಿ ಆಗ್ತಾರಾ ಅನ್ನೋದಕ್ಕೆ ಕೆಲವೇ ಹೊತ್ತಲ್ಲಿ ಉತ್ತರ ಸಿಗಲಿದೆ.
Advertisement
ರಾಮಗರದಲ್ಲಿ ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ರೆ ಬಿಜೆಪಿಯಿಂದ ಎಲ್ ಚಂದ್ರಶೇಖರ್ ಅವರು ಅಭ್ಯರ್ಥಿಯಾಗಿದ್ದರು. ಆದ್ರೆ ಚಂದ್ರಶೇಖರ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv