ಜೈಪುರ: ತನ್ನ ಫೇಸ್‌ಬುಕ್ ಪ್ರೇಮಿ ನಸ್ರುಲ್ಲಾಳನ್ನು ಮದುವೆಯಾಗಲು ಪಾಕಿಸ್ತಾನಕ್ಕೆ (Pakistan) ತೆರಳಿದ್ದ ಭಾರತದ ಮಹಿಳೆ ಅಂಜು (Anju) ಅಲಿಯಾಸ್ ಫಾತಿಮಾ (34) ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ಭಾರತಕ್ಕೆ ಬಂದಿರುವುದಾಗಿ ತಿಳಿಸಿದ್ದಾಳೆ. ಆದ್ರೆ ಮಕ್ಕಳು ಆಕೆಯನ್ನ ಭೇಟಿಯಾಗುವುದಿಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ದೆಹಲಿಗೆ (NewDelhi) ಬಂದಿದ್ದ ಅಂಜು, ತುಂಬಾ ಸಂತೋಷವಾಗಿದ್ದೀನಿ, ಬೇರೆ ಹೇಳೋದಕ್ಕೆ ಏನೂ ಇಲ್ಲ ಎಂದು ಹೇಳಿದ್ದರು. ಅಲ್ಲದೇ ಪತಿಗೆ ಡಿವೋರ್ಸ್ ನೀಡಿ, ಮಕ್ಕಳನ್ನು ಪಾಕಿಸ್ತಾನಕ್ಕೆ ಕರೆದುಕೊಂಡು ಹೋಗುವ ಬಗ್ಗೆ ಒಲವು ತೋರಿದ್ದರು. ಆದ್ರೆ ಅವರು ರಾಜಸ್ಥಾನದ ಭಿವಾಡಿಯಲ್ಲಿರುವ ತಮ್ಮ ತವರು ಮನೆಗೂ ತೆರಳಿಲ್ಲ, ಮಕ್ಕಳನ್ನು ಭೇಟಿಯಾಗಿಲ್ಲ. ತಾವಿರುವ ಸ್ಥಳವನ್ನೂ ಬಹಿರಂಗಪಡಿಸಿಲ್ಲ. ಆದ್ರೆ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ಇರುವುದಾಗಿ ಸ್ಥಳೀಯ ಮೂಲಗಳು ತಿಳಿಸಿವೆ.
Advertisement
Advertisement
ಅಂಜು ತಂಗಿರುವ ರೆಸಿಡೆನ್ಶಿಯಲ್ ಸೊಸೈಟಿಗೆ ಭದ್ರತೆ ಹೆಚ್ಚಿಸಲಾಗಿದೆ. ಎಲ್ಲಾ ವಾಹನಗಳು ಮತ್ತು ಅಪರಿಚಿತರನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಪ್ರವೇಶಿಸಲು ಅನುಮತಿಸಲಾಗಿದೆ. ಇಂಟೆಲಿಜೆನ್ಸ್ ಬ್ಯೂರೋದ ತಂಡವು ಅಂಜು ಅವರ 15 ವರ್ಷದ ಮಗಳು ಮತ್ತು 6 ವರ್ಷದ ಮಗನನ್ನೂ ವಿಚಾರಣೆ ನಡೆಸುತ್ತಿದೆ.
Advertisement
ಅಂಜು ಪ್ರಕರಣದ ತನಿಖೆ ನಡೆಯುತ್ತಿದೆ ಮತ್ತು ಜನರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಭಿವಾಡಿ ಹೆಚ್ಚುವರಿ ಎಸ್ಪಿ ದೀಪಕ್ ಸೈನಿ ಹೇಳಿದ್ದಾರೆ. ಬೇಕಿದ್ದರೆ ಅಂಜು ಅವರನ್ನು ಕೂಡ ವಿಚಾರಣೆ ನಡೆಸಿ ಬಂಧಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿರೀಕ್ಷೆಗೂ ಮೀರಿ ವೃದ್ಧಿ – ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?
Advertisement
ಅಂಜು ವಾಘಾ ಗಡಿಯ ಮೂಲಕ ಭಾರತಕ್ಕೆ ಮರಳಿದ ನಂತರ, ಆಕೆಯನ್ನು ಪಂಜಾಬ್ ಪೊಲೀಸ್‌ನ ಗುಪ್ತಚರ ತಂಡ ಮತ್ತು ಅಮೃತಸರದಲ್ಲಿ ಐಬಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ಇದಕ್ಕೂ ಮುನ್ನ ಭಾರತದಲ್ಲಿರುವ ಪತಿ ಅರವಿಂದ್‌ಗೆ ವಿಚ್ಛೇದನ ನೀಡಿದ ನಂತರ ತನ್ನ ಮಕ್ಕಳನ್ನು ಪಾಕಿಸ್ತಾನಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದಾಳೆ. ಆದ್ರೆ ಅರವಿಂದ್ ಅವಳೊಂದಿಗೆ ಮಾತನಾಡಲು ಆಸಕ್ತಿ ಇಲ್ಲ. ಜೊತೆಗೆ ನಾನಿನ್ನೂ ವಿಚ್ಛೇದನ ಪಡೆದಿಲ್ಲ, ವಿಚ್ಛೇದನಕ್ಕೆ 3 ರಿಂದ 5 ತಿಂಗಳು ಸಮಯ ಬೇಕು ಎಂದಿದ್ದಾರೆ.
ಅಂಜು ಭಾರತಕ್ಕೆ ಬರಲು ಕೇವಲ 1 ತಿಂಗಳಿಗೆ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದಿದ್ದಾರೆ. ಕಾನೂನು ತಜ್ಞರ ಪ್ರಕಾರ, ವಿಚ್ಛೇದನದ ನಂತರವೇ ಅವಳು ತನ್ನ ಮಕ್ಕಳ ಪಾಲನೆಯನ್ನು ಪಡೆಯಬಹುದು ಮತ್ತು ಅದಕ್ಕಿಂತ ಮೊದಲು ಅಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ಪತಿಗೆ ಡಿವೋರ್ಸ್ ಕೊಟ್ಟು ಮಕ್ಕಳನ್ನು ಪಾಕಿಸ್ತಾನಕ್ಕೆ ಕರೆದೊಯ್ಯಲಿದ್ದಾಳಂತೆ ಅಂಜು!
ಅಂಜು ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆಯಾಗಿದ್ದು, ಫೇಸ್‍ಬುಕ್‍ನಲ್ಲಿ ಪರಿಚಯ ಮಾಡಿಕೊಂಡು, ಪ್ರೀತಿಸುತ್ತಿದ್ದ ಪಾಕಿಸ್ತಾನದ ವ್ಯಕ್ತಿಯನ್ನು ಭೇಟಿಯಾಗಲು ಖೈಬರ್ ಪಖ್ತುಂಕ್ವಾಗೆ ತೆರಳಿದ್ದಳು. ಕೆಲ ದಿನ ಜೈಪುರಕ್ಕೆ ಹೋಗುವುದಾಗಿ ಆಕೆ ತನ್ನ ಮೊದಲ ಪತಿ ಅರವಿಂದ್‍ಗೆ ಹೇಳಿದ್ದಳು. ಆದರೆ ಅಂಜು ಗಡಿ ದಾಟಿ ಪಾಕಿಸ್ತಾನಕ್ಕೆ ಹೋಗಿರುವುದು ಆಕೆಯ ಪತಿಗೆ ಮಾಧ್ಯಮಗಳ ಮೂಲಕ ತಿಳಿದುಬಂದಿತ್ತು.