Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಕನ್ನಡದ ಜ್ಞಾನ ದಾಸೋಹಿʼ ಮಂಡ್ಯದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಗರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ʻಕನ್ನಡದ ಜ್ಞಾನ ದಾಸೋಹಿʼ ಮಂಡ್ಯದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಗರಿ

Districts

ʻಕನ್ನಡದ ಜ್ಞಾನ ದಾಸೋಹಿʼ ಮಂಡ್ಯದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಗರಿ

Public TV
Last updated: January 25, 2026 3:32 pm
Public TV
Share
2 Min Read
Anke Gowda
SHARE

ನವದೆಹಲಿ/ಬೆಂಗಳೂರು: ಕನ್ನಡ ಜ್ಞಾನ ದಾಸೋಹಿ, ಪುಸ್ತಕ ಭಂಡಾರ ಸೃಷ್ಟಿಸಿದ ಮಂಡ್ಯ ಜಿಲ್ಲೆಯ ಅಂಕೇಗೌಡ (Anke Gowda) ಅವರು ಈ ಬಾರಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ (Literature and Education field) 2026 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

#WATCH | Padma Awards: Anke Gowda from Karnataka will be conferred the Padma Shri 2026 in the field of Literature and Education, as per sources

This year’s Padma Awards recognise a wide spectrum of unsung heroes from across the length and breadth of India. These include… pic.twitter.com/j6SaAleqST

— ANI (@ANI) January 25, 2026

ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಅಂಕೇಗೌಡರು, ದೊಡ್ಡ ಜ್ಞಾನ ಭಂಡಾರವನ್ನೇ ಸೃಷ್ಟಿಸಿದ್ದಾರೆ. ಪಾಂಡವಪುರದಿಂದ ಕೇವಲ ಒಂದು ಕಿಲೋ ಮೀಟರ್ ದೂರದ ಹರಳಹಳ್ಳಿಯಲ್ಲಿ ಪುಸ್ತಕದ ಮನೆ ನಿರ್ಮಾಣ ಮಾಡಿದ್ದು, ಇಲ್ಲಿ ಲಕ್ಷಗಟ್ಟಲೆ ಪುಸ್ತಕಗಳ ಸಂಗ್ರಹವಿದೆ. ಒಂದೊಂದೇ ಪುಸ್ತಕ ಸಂಗ್ರಹ ಮಾಡುತ್ತಾ ದೊಡ್ಡ ಸಂಗ್ರಹಾಲಯವನ್ನೇ ತೆರೆದಿದ್ದಾರೆ. ಇಲ್ಲಿಗೆ ಯಾರೇ ಬಂದರೂ, ಯಾವುದೇ ವಿಷಯದ ಪುಸ್ತಕಗಳನ್ನ ನೋಡಬಹುದು, ಓದಬಹುದು. ವಿಶ್ವದ ಎಲ್ಲಾ ಪ್ರಮುಖ ಗ್ರಂಥಗಳು ಒಂದೇ ಸೂರಿನಡಿ ಓದಲು ಸಿಗುವುದು ಈ ಪುಸ್ತಕ ಮನೆಯ ವಿಶೇಷ.

ಜ್ಞಾನ ದಾಸೋಹಿಯ ʻಪುಸ್ತಕ ಪ್ರೇಮʼ ಹುಟ್ಟಿದ್ದು ಹೇಗೆ?
ಅಂಕೇಗೌಡರ ಪುಸ್ತಕ ಪ್ರೀತಿಗೆ ಕಾರಣವಾಗಿದ್ದು ಶಾಲಾ ಗ್ರಂಥಾಲಯ. ಶಾಲಾ ದಿನಗಳಲ್ಲಿ ಪುಸ್ತಕಕ್ಕಾಗಿ ಗ್ರಂಥಾಲಯಕ್ಕೆ ಹೋದ ಅಂಕೇಗೌಡರಿಗೆ ಶಿಕ್ಷಕರು ಹೇಳಿದ ಆ ಮಾತು. ಇಂದು ವಿಶ್ವದ ದೊಡ್ಡ ಖಾಸಗಿ ಗ್ರಂಥಾಲಯ ನಿರ್ಮಾಣಕ್ಕೆ ಕಾರಣವಾಗಿದೆ. ಶಾಲಾ ದಿನಗಳಲ್ಲಿ ಪುಸ್ತಕಗಳನ್ನ ಮನೆಗೆ ಕೊಡದ ಹಿನ್ನೆಲೆ, ಪುಸ್ತಕ ಸಂಗ್ರಹ ಹಾಗೂ ಖರೀದಿಗೆ ಮುಂದಾದ ಅಂಕೇಗೌಡರು, ಇಂದು ದೊಡ್ಡ ಜ್ಞಾನ ಭಂಡಾರವನ್ನೇ ಸೃಷ್ಟಿಸಿದ್ದಾರೆ.

Anke Gowda 03

ಈಗಾಗಲೇ ಈ ಪುಸ್ತಕದ ಮನೆಯು ಲಿಮ್ಕಾ ಬುಕ್ ಆಫ್ ರೆಕಾರ್ಡ್‌ಗೆ ಸೇರಿಕೊಂಡಿದ್ದು, ಪ್ರತಿಯೊಂದು ಪುಸ್ತಕವೂ ಮೌಲ್ಯಯುತವಾಗಿವೆ.‌ ಸಣ್ಣ ಕಟ್ಟಡದಲ್ಲೇ ಮೊದ ಮೊದಲು ಪುಸ್ತಕ ಮನೆಯನ್ನ ಆರಂಭಿಸಲಾಗಿತ್ತು. ಈಗ ಉದ್ಯಮಿ ಹರಿಕೋಡೆ ಕಟ್ಟಿಕೊಟ್ಟ ಕಟ್ಟಡ ಈ ಮನೆಗೆ ಮತ್ತೊಂದು ಆಯಾಮ ನೀಡಿದೆ. ಅಂಕೇಗೌಡರ ಈ ದೊಡ್ಡ ಸಾಧನೆಗೆ ಅವರ ಪತ್ನಿಯ ಸಹಕಾರವೂ ಇದೆ. ಪುಸ್ತಕಗಳ ಜೋಡಿಸುವಿಕೆಯಿಂದ ಹಿಡಿದು ಸ್ವಚ್ಛತಾ ಕಾರ್ಯದಲ್ಲೂ ಕೈಜೋಡಿಸಿ ಪತಿಯ ಕಾರ್ಯಕ್ಕೆ ಅವರು ಸಹಕಾರ ನೀಡುತ್ತಾ ಬಂದಿದ್ದಾರೆ.

ಒಮ್ಮೆ ಈ ಪುಸ್ತಕದ ಮನೆಗೆ (Pustaka Mane) ನೀವು ಕಾಲಿಟ್ಟರೆ ಸಾಕು ಪುಸ್ತಕ ಲೋಕವೇ ನಿಮ್ಮ ಕಣ್ಣ ಮುಂದೆ ಬಂದು ಬಿಡುತ್ತದೆ. ಹೊಟ್ಟೆಯ ಹಸಿವಿಗಿಂತ ಜ್ಞಾನದ ಹಸಿವು ನಿಮ್ಮನ್ನು ಕೈಬೀಸಿ ಕರೆಯುತ್ತದೆ. ಪಾಂಡವಪುರ-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಹೋದರೆ ನಿಮ್ಮನ್ನು ಸೂಜಿಗಲ್ಲಿನಂತೆ ಸೆಳೆಯಲಿದೆ ಈ ಪುಸ್ತಕದ ಮನೆ.

Anke Gowda 02

ಪುಸ್ತಕ ಪ್ರೇಮವು ಇಂದು ಅಂಕೇಗೌಡರನ್ನು ಎತ್ತರದ ಸ್ಥಾನದಲ್ಲಿಟ್ಟಿದೆ. ಅಂಕೇಗೌಡರು ಎಂದರೆ ಪುಸ್ತಕ ಮನೆ ಎನ್ನುವಂತೆ ಗುರುತಿಸುವಂತಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಒಂದು ಗ್ರಂಥಾಲಯವನ್ನ ಹುಟ್ಟು ಹಾಕಿದ ಇವರ ಈ ಸಾಧನೆಗೆ ಈಗ ಸರ್ಕಾರ ಮೆಚ್ಚಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ.

TAGGED:Anke GowdakarnatakamandyaPadma AwardsPadma Shri 2026ಅಂಕೇಗೌಡರು. ಪುಸ್ತಕ ಮನೆಪದ್ಮಶ್ರೀ ಪ್ರಶಸ್ತಿ 2026ಮಂಡ್ಯ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
1 hour ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
2 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
2 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
4 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
5 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?