ಮದುವೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅಂಕಿತಾ ಲೋಖಂಡೆ

Public TV
1 Min Read
Ankita Lokhande

ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮತ್ತೆ ಸುದ್ದಿ ಆಗುತ್ತಿದ್ದಾರೆ ಅಂಕಿತಾ ಲೋಖಂಡೆ (Ankita Lokhande) ಹಾಗೂ ವಿಕ್ಕಿ ದಂಪತಿ. ತನ್ನ ಪತಿ ಬಿಗ್ ಬಾಸ್ ಸ್ಪರ್ಧಿ ಮನ್ನಾರಾ ಚೋಪ್ರಾ ಜೊತೆ ಕ್ಲೋಸ್ ಆಗುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಪತಿ ವಿಕ್ಕಿ ಮೇಲೆ ಕೋಪಗೊಂಡಿದ್ದಾರೆ. ಆತನನ್ನು ಮದುವೆ ಆಗಿದ್ದಕ್ಕೆ ಕಣ್ಣೀರು ಇಟ್ಟಿದ್ದಾರೆ. ಜೊತೆಗೆ ವಿಷಾದವನ್ನೂ ವ್ಯಕ್ತ ಪಡಿಸಿದ್ದಾರೆ. ಆಕೆ ನಿನ್ನ ಜೀವನದಲ್ಲಿ ಬಂದಳು. ನೀನು ಇಷ್ಟ ಪಡ್ತಿದ್ದೀಯಾ ಎಂದು ಮಾತನಾಡಿದ್ದಾರೆ.

Ankita Lokhande 1

ಬಿಗ್ ಬಾಸ್ (Bigg Boss) ಮನೆಯಲ್ಲಿ ವಿಕ್ಕಿ ಮತ್ತು ಅಂಕಿತಾ ನಡೆಯನ್ನೇ ಅರ್ಥ ಮಾಡಿಕೊಳ್ಳಲು ಆಗುತ್ತಿದೆ. ಮೊನ್ನೆಯಷ್ಟೇ ಒಂದೇ ಬ್ಲ್ಯಾಂಕೆಟ್ ಹೊದ್ದುಕೊಂಡು ಈ ಜೋಡಿ ಮಲಗಿತ್ತು. ಅದು ರಾತ್ರಿ ವೇಳೆ ಸುಮ್ಮನೆ ಮಲಗಿಲ್ಲ, ಬ್ಲ್ಯಾಂಕೆಟ್ ಒಳಗೆ ಚಲಿಸಿದ್ದರು. ಬ್ಲ್ಯಾಂಕೆಟ್ ಅಸ್ತವ್ಯಸ್ತಗೊಂಡಿತ್ತು. ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು.

Ankita Lokhande

ಇದೇ ಜೋಡಿ ಕೆಲವು ದಿನಗಳ ಹಿಂದೆ ಇದೇ ಬಿಗ್ ಬಾಸ್ ಮನೆಯಲ್ಲಿ  ಡಿವೋರ್ಸ್ (Divorce) ಕುರಿತಂತೆ ಮಾತನಾಡಿದ್ದರು. ಈ ನಡೆಯೂ ಅಚ್ಚರಿಗೆ ಕಾರಣವಾಗಿತ್ತು.  ಪ್ರೀತಿಸಿ ಮದುವೆ ಆಗಿರೋ ಈ ಜೋಡಿ ಬಿಗ್ ಬಾಸ್ ಮನೆಯಲ್ಲಿ ದಿನವೂ ಕಿತ್ತಾಡುತ್ತಲೇ ಇರುತ್ತಾರೆ. ಟಾಸ್ಕ್ ವಿಚಾರದಲ್ಲಂತೂ ಗಂಡ ಹೆಂಡತಿ ಅನ್ನೋದನ್ನೂ ಮರೆಯುತ್ತಾರೆ. ದಿನವೂ ಕಿರಿಕ್ ಮಾಡಿಕೊಂಡು ಜನರಿಗೆ ಮನರಂಜನೆ ನೀಡುತ್ತಿದ್ದಾರೆ. ಡಿವೋರ್ಸ್ ವಿಚಾರ ಮಾತನಾಡಿ ಶಾಕ್ ಮೂಡಿಸಿದ್ದರು.

 

ಅಂಕಿತಾ ಲೋಖಂಡೆ ಈ ಹಿಂದೆ ಸುಶಾಂತ್ ಸಿಂಗ್ ರಜಪೂತ್ ಜೊತೆ ಡೇಟಿಂಗ್ ಮಾಡುತ್ತಿದ್ದರು. ಅದನ್ನು ಬ್ರೇಕ್ ಮಾಡಿಕೊಂಡು ವಿಕ್ಕಿ ಜೈನ್ ಜೊತೆ ಒಂದಾದರು. ಮದುವೆ ಮಾಡಿಕೊಂಡು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ. ಈಗ ಅಲ್ಲಿಯೂ ಕಿತ್ತಾಡಿಕೊಂಡಿದ್ದಾರೆ. ಅಲ್ಲದೇ ಮೊನ್ನೆಯ ಸಂಚಿಕೆಯಲ್ಲಿ ವಿಕ್ಕಿ ಜೈನ್ ವಿವಾಹಿತರ ಕಷ್ಟಗಳ ಬಗ್ಗೆ ಮಾತಾಡುತ್ತಾರೆ. ಅಷ್ಟೊಂದು ಕಷ್ಟವಾದರೆ, ವಿಚ್ಛೇದನ ಪಡೆದುಕೊಳ್ಳೋಣ ಎಂದು ಹೇಳುವ ಮೂಲಕ ಶಾಕ್ ನೀಡಿದ್ದಾರೆ ಅಂಕಿತಾ. ಈಗ ಮತ್ತೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Share This Article