ಇಂದು (ಡಿ.27) ಕೊಯಮತ್ತೂರಿನ (Coimbatore) ನಿವಾಸದ ಮುಂದೆ ಚಾಟಿಯಲ್ಲಿ ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಧಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಭಾಯಿಸುವಲ್ಲಿ ಪೊಲೀಸರು ಮತ್ತು ರಾಜ್ಯ ಸರ್ಕಾರ ನಿರಾಸಕ್ತಿ ತೋರಿಸುತ್ತಿದೆ ಎಂದು ಪ್ರತಿಭಟನೆ ಮೂಲಕ ಖಂಡಿಸಿದ್ದಾರೆ.ಇದನ್ನೂ ಓದಿ: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಅಬ್ದುಲ್ ರಹಮಾನ್ ಮಕ್ಕಿ ಸಾವು
ಇದಕ್ಕೂ ಮುನ್ನ ತಮಿಳುನಾಡು ರಾಜ್ಯದಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವವರೆಗೂ ಶೂ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಜೊತೆಗೆ ಆರು ಬಾರಿ ಚಾಟಿ ಏಟು ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದರು. ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಆರೋಪಿಸಿದ್ದರು.
ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ. ಅದಕ್ಕಾಗಿಯೇ ಈಗ ಬಿಜೆಪಿ ಸದಸ್ಯರು ತಮ್ಮ ಮನೆಗಳ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.ಇದನ್ನೂ ಓದಿ: ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಕೊಡಗಿನ ಯೋಧ ಸ್ಥಿತಿ ಚಿಂತಾಜನಕ