ಬೀದರ್: ಅನ್ನ ಭಾಗ್ಯ ಯೋಜನೆಯಡಿ ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿಯನ್ನು ಕಾಳ ಸಂತೆಗೆ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, 35 ಟನ್ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹೈದ್ರಾಬಾದ್-ಮುಂಬೈ ಮಾರ್ಗದ ರಾಷ್ಟ್ರೀಯ ಹೆದ್ದಾರಿ-65ರ ಹುಮನಾಬಾದ್ ಕಡೆಯಿಂದ ಲಾರಿಯಲ್ಲಿ ಅಕ್ಕಿ ಸಾಗಿಸಲಾಗುತಿತ್ತು. ಜಿಲ್ಲೆಯ ಬಸವ ಕಲ್ಯಾಣದ ತಡೋಳಾ ಬಳಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
Advertisement
ಲಾರಿ ಸಹಿತ 35 ಟನ್ ಪಡಿತರ ಅಕ್ಕಿ ಜಪ್ತಿ ಮಾಡಿಕೊಂಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಆಹಾರ ಇಲಾಖೆಯ ನಿರೀಕ್ಷಕರಾದ ರವಿ ಸೂರ್ಯವಂಶಿ ಹಾಗೂ ರಾಮರತನ ದೇಗಲೆ ನೇತೃತ್ವದ ತಂಡ ದಾಳಿ ನಡೆಸಿದೆ. ಕಾಳ ಸಂತೆಯಲ್ಲಿ ಮಾರಾಟ ಮಾಡಲೆಂದು ಬೀದರ್‍ನಿಂದ ಗುಜರಾತಿಗೆ ಅಕ್ಕಿ ಸಾಗಿಸಲಾಗುತಿತ್ತು. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.