ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Government) 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ (Annabhagya Scheme) ಯ 5 ಕೆ.ಜಿ ಅಕ್ಕಿ ಕೊಟ್ಟು ಉಳಿದ 5 ಕೆ.ಜಿ ಅಕ್ಕಿಯ ಬದಲು ಅದರ ಹಣವನ್ನು ನೀಡುವುದಾಗಿ ಸರ್ಕಾರ ನಿರ್ಧಾರ ಮಾಡಿದೆ.
ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಬಳಿಕ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಹಾಗೂ ಹೆಚ್.ಕೆ ಪಾಟೀಲ್, ಅನ್ನಭಾಗ್ಯ ಯೋಜನೆ ಅಕ್ಕಿ ಹೊಂದಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾಪ ತಿರಸ್ಕಾರ ಹಾಗೂ ಇತರೆ ರಾಜ್ಯಗಳಿಂದ ಅಕ್ಕಿ ಕೊಳ್ಳುವ ಮುಂದಿನ ನಡೆ ಬಗ್ಗೆ ಸಹ ಚರ್ಚೆ ನಡೆಸಲಾಯಿತು ಎಂದರು.
Advertisement
Advertisement
ಬಳಿಕ 10 ಕೆ.ಜಿ ಅಕ್ಕಿ ಬದಲಿಗೆ 8 ಕೆ.ಜಿ ಅಕ್ಕಿ, 2 ಕೆ.ಜಿ ರಾಗಿ/ಗೋಧಿ ಅಥವಾ ಜೋಳ ಕೊಡುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಈ ವೇಳೆ 5 ಕೆ.ಜಿ ಅಕ್ಕಿ ಕೊಟ್ಟು ಇನ್ನೂ 5 ಕೆ.ಜಿ ಅಕ್ಕಿಗೆ ಹಣ ಕೊಡುವುದರ ಬಗ್ಗೆ ನಿರ್ಧಾರ ಮಾಡಲಾಯಿತು ಎಂದು ಹೇಳಿದರು. ಇದನ್ನೂ ಓದಿ: Gruha Lakshmi Scheme: ಪ್ರತ್ಯೇಕ ಆಪ್‍ಗೆ ಕ್ಯಾಬಿನೆಟ್‌ನಲ್ಲಿ ಗ್ರೀನ್ ಸಿಗ್ನಲ್
Advertisement
ಕೇಂದ್ರ ಸಚಿವರಿಗೆ ಮನವಿ ಮಾಡಿ ಒತ್ತಾಯ ಮಾಡಿದ್ದೆವು. 15 ಲಕ್ಷ ಟನ್ ಅನ್ನು ಓಪನ್ ಟೆಂಡರ್ ಕರೆದು ಕೇಂದ್ರದವರು ಕೊಟ್ಟಿದ್ದಾರೆ. ಆದ್ರೆ ನಮಗೆ ಅಕ್ಕಿ ಕೊಡಲು ನಿರಾಕರಣೆ, ರಾಜಕೀಯ ಮಾಡಿದ್ರು. ಎಫ್ ಸಿಐ 34 ರೂ. ದರ ಫಿಕ್ಸ್ ಮಾಡಿದ್ದಾರೆ. ಎಫ್ ಸಿಐ ರೇಟ್ ಗೆ ಬೇರೆ ಸಂಸ್ಥೆಗಳು ಅಕ್ಕಿ ಕೊಡಲು ಮುಂದೆ ಬರಲಿಲ್ಲ. ಅಕ್ಕಿ ದಾಸ್ತಾನು ತಯಾರಾಗುವ ತನಕ ಕೆಜಿಗೆ 34 ರೂ. ಹಣವನ್ನ ಕೊಡುತ್ತೇವೆ ಎಂದು ಕೆ.ಹೆಚ್ ಮುನಿಯಪ್ಪ ಹೇಳಿದರು.
Advertisement
ಪ್ರತಿ ಕಾರ್ಡ್ ಗೆ ಕರ್ನಾಟಕ ಸರ್ಕಾರ ಕೊಡುವ ಅಕ್ಕಿ ಆಧಾರದ ಮೇಲೆ ಕೆ.ಜಿ 34 ರೂ.ಗೆ ಅಕ್ಕಿ ಕೊಡುತ್ತೇವೆ. ಅಕ್ಕಿ ದಾಸ್ತಾನು ಆಗುವ ತನಕ ಹಣ ಕೊಡುತ್ತೇವೆ. ಎಷ್ಟು ಬೇಗ ಅಷ್ಟು ಬೇಗ ಅಕ್ಕಿ ಕೊಡುತ್ತೇವೆ. ಸದ್ಯಕ್ಕೆ ಹಣವನ್ನ ಕೊಡುತ್ತೇವೆ. ಇದಕ್ಕೆ ಈಗ 750 ಕೋಟಿ ಅಥವಾ 800 ಕೋಟಿ ರೂ. ಅಂದಾಜು ಆಗಲಿದೆ. ಹೆಡ್ ಆಫ್ ದಿ ಫ್ಯಾಮಿಲಿ ಸದಸ್ಯರ ಅಕೌಂಟ್ ಗೆ ಹಣ ಹಾಕುತ್ತೇವೆ. 90% ಕಾರ್ಡ್ ಹೊಂದಿರುವವರ ಅಕೌಂಟ್ ಇದೆ, ಆಧಾರ್ ಲಿಂಕ್ ಮಾಡಿದ್ದಾರೆ. ಹಾಗಾಗಿ ಅವರಿಗೆ ಹಣ ಹಾಕುತ್ತೇವೆ ಎಂದರು.
Web Stories