Connect with us

Karnataka

ಅಣ್ಣಾಮಲೈಗೆ ಕೊರೊನಾ ಸೋಂಕು ದೃಢ

Published

on

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವಾಗಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಮತ್ತು ನನ್ನ ಸುತ್ತಮುತ್ತಲಿನವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸುತ್ತೇನೆ ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

2019ರಲ್ಲಿ ದಿಢೀರನೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದ ಅಣ್ಣಾಮಲೈ ಕೆಲ ತಿಂಗಳ ಬಳಿಕ ಬಿಜೆಪಿ ಸೇರಿ ಅಚ್ಚರಿ ಹುಟ್ಟಿಸಿದ್ದರು. ಬಿಜೆಪಿಯ ಅಸ್ತಿತ್ವವೇ ಇಲ್ಲದ ಕರೂರು ಜಿಲ್ಲೆಯ ಅರವಕುರಿಚ್ಚಿ ವಿಧಾನಸಭಾ ಕ್ಷೇತ್ರದಿಂದ ಕಮಲ ಬಾವುಟ ಹಿಡಿದು ಸ್ಪರ್ಧೆಗೆ ಇಳಿದಿದ್ದರು. ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Click to comment

Leave a Reply

Your email address will not be published. Required fields are marked *