ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ರಾಜ್ಯ ಗುಪ್ತಚರ ವಿಭಾಗ ಕೆಲವು ದಿನಗಳಿಂದ ತಮ್ಮ ಫೋನ್ ಅನ್ನು ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಹಿಂದೆ ತಮ್ಮ ಕಚೇರಿಗೆ ನೀಡಲಾಗಿದ್ದ ರಕ್ಷಣೆಯನ್ನೂ ಕಡಿತಗೊಳಿಸಲಾಗಿದೆ. ವೈ-ಕೆಟಗರಿ ರಕ್ಷಣೆಯನ್ನು ಎಕ್ಸ್- ಕೆಟಗರಿಗೆ ಬದಲಾಯಿಸಲಾಗಿದೆ ಎಂದು ಹೇಳಿದರು.
Advertisement
ರಾಜ್ಯ ಗುಪ್ತಚರ ಇಲಾಖೆ ತಮಿಳುನಾಡು ಪೊಲೀಸರ ಮೇಲೆ ದರ್ಪ ತೋರಿಸುತ್ತಿದೆ. ಗುಪ್ತಚರ ವಿಭಾಗದ ಎಡಿಜಿಪಿ ಪೊಲೀಸ್ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ. ಎಫ್‌ಐಆರ್ ದಾಖಲಿಸುವ ಮುನ್ನವೇ ತೀರ್ಮಾನ ತೆಗೆದುಕೊಂಡಿರುವುದು ಇದೇ ಮೊದಲು ಎಂದು ಹೇಳಿದರು. ಇದನ್ನೂ ಓದಿ: ಎಬಿವಿಪಿ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಭಾಗಿಯೇ ಹಿಜಬ್ ವಿವಾದಕ್ಕೆ ಮೂಲ ಕಾರಣ?
Advertisement
Advertisement
ಗುಪ್ತಚರ ವಿಭಾಗ ಪೊಲೀಸರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ಎಲ್ಲರಿಗೂ ತಿಳಿದಿರುವ ರಹಸ್ಯ. ನಾವು ಏನೇ ಹೇಳಿದರೂ ಅದು ಸಾರ್ವಜನಿಕ ವಲಯದಲ್ಲಿ ಬರುತ್ತದೆ. ತಮಿಳುನಾಡು ಗುಪ್ತಚರ ತಂಡ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದೆ. ಇದನ್ನು ಸಾಬೀತುಪಡಿಸಲು ನಾನು ವಾಟ್ಸಪ್ ಚ್ಯಾಟ್‌ಗಳ ಸ್ಕ್ರೀನ್ ಶಾಟ್‌ಗಳನ್ನೂ ಹಂಚಿಕೊಂಡಿದ್ದೇನೆ. ಇದರ ಬಗ್ಗೆ ಶೀಘ್ರವೇ ದೂರು ದಾಖಲಿಸಲಿದ್ದೇನೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ WWE ಸ್ಟಾರ್ ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ