ಬೆಂಗಳೂರು: ಕರ್ನಾಟಕ ಸಿಎಂ ಫೈಟ್ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ.ಶಿವಕುಮಾರ್ ಅವರಿಂದಲೇ ಘೋಷಣೆ ಮಾಡಿಸಲಾಯಿತು.
ಕರ್ನಾಟಕ ಸಿಎಂ ಸಿದ್ದರಾಮಯ್ಯ ಎಂದು ಡಿಕೆಶಿ ಘೋಷಿಸಿ, ನಂತರ ಸಿದ್ದು ಕೈ ಕುಲುಕಿ ವಿಶ್ ಮಾಡಿದರು. ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಘೋಷಿಸಿದರು. ಆ ಮೂಲಕ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ರವಾನೆ ಮಾಡಿದರು.
Advertisement
Advertisement
ಇದಕ್ಕೂ ಮುನ್ನ ಸಭೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಕ್ಕ ಪಕ್ಕ ಕುಳಿತಿರಲಿಲ್ಲ. ಸಭೆಯಲ್ಲಿ ಮೊದಲು ಮಾತನಾಡಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಸರ್ಕಾರ ತರುವಲ್ಲಿ ಟೀಂ ಕಾಂಗ್ರೆಸ್ ಪಾತ್ರ ಬಹಳ ದೊಡ್ಡದು. ಸಿದ್ದರಾಮಯ್ಯ, ಡಿಕೆಶಿ ಕೂಡ ಸಮರ್ಥವಾಗಿ ಮುನ್ನಡೆಸಿದ್ದಾರೆ. ಇದೊಂದು ದೊಡ್ಡ ಮಟ್ಟದ ವಿಜಯ. ಕರ್ನಾಟಕದ ಜನ, ನಮ್ಮ ಕಾರ್ಯಕರ್ತರನ್ನ ಮರೆಯದಿರಿ. ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಎಂದು ಹೈಕಮಾಂಡ್ ತೀರ್ಮಾನ ಆಗಿದೆ. ಸರ್ವಾನುಮತದಿಂದ ಆಯ್ಕೆ ಮಾಡೋಣ ಎಂದು ತಿಳಿಸಿದರು.
Advertisement
Advertisement
ನಂತರ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರನ್ನು ಸೂಚಿಸಿದರು. ನಂತರ ಸಿದ್ದುಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಪಕ್ಷ ಹಾಗೂ ಶಾಸಕರಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದರು.