ಬೆಂಗಳೂರು: ನಗರದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದ್ದು, ಜೆ.ಸಿ ನಗರದ ನಂದಿದುರ್ಗಾ ರಸ್ತೆಯ ಚಿನ್ನಪ್ಪ ಗಾರ್ಡನ್ ಬಳಿ ನಡೆದಿದೆ.
ಜೆ.ಸಿ. ನಗರದ ನಿವಾಸಿ 28 ವರ್ಷದ ಸಂತೋಷ್ ಹತ್ಯೆಯಾದ ಯುವಕ. ಸಂತೋಷ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಬಿಜೆಪಿ ಪರ ಓಡಾಡಿಕೊಂಡಿದ್ದರು. ಆದರೆ ಬುಧವಾರ ರಾತ್ರಿ ನಾಲ್ವರು ದುಷ್ಕರ್ಮಿಗಳು ಸಂತೋಷರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
Advertisement
Advertisement
ಬುಧವಾರ ರಾತ್ರಿ ಸುಮಾರು 7:30 ರಲ್ಲಿ ಹೊತ್ತಿಗೆ ಸಂತೋಷ್ ತಮ್ಮ ಮನೆ ಬಳಿ ಇದ್ದ ಬೇಕರಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದರು. ಈ ವೇಳೆ ಅದೇ ಏರಿಯಾದ ವಸೀಂ, ಉಮರ್, ಫಿಲಿಪ್ಸ್ ಮತ್ತು ಇರ್ಫಾನ್ ಎಂಬುವವರು ಕೂಡ ಅಲ್ಲೇ ಟೀ ಕುಡಿಯುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದು ವಸೀಂ ಎಂಬಾತ ತನ್ನ ಬಳಿ ಇದ್ದ ಚಾಕುವಿನಿಂದ ಸಂತೋಷ್ ತೊಡೆಗೆ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸಂತೋಷ್ ಕೊನೆಯುಸಿರೆಳೆದಿದ್ದಾನೆ.
Advertisement
ಈ ಹಿಂದೆ ಆರೋಪಿ ವಸೀಂ, ಉಮರ್, ಮತ್ತು ಫಿಲಿಪ್ಸ್ ಎಂಬುವವರಿಗೆ ಸಂತೋಷ್ ಕರೆದು ಅವಾಜ್ ಹಾಕಿದ್ದು, ನಮ್ ಏರಿಯಾದಲ್ಲಿ ಗಾಂಜಾ ಸೇದಬೇಡಿ ಅಂತ ಜೋರು ಮಾಡಿದ್ದರು ಎಂಬ ಮಾಹಿತಿಗಳು ಲಭ್ಯವಾಗಿವೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು. ಹೀಗಾಗಿ ಕೊಲೆ ನಡೆದಿರಬಹುದೆಂದು ಜೆ.ಸಿ ನಗರ ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ವಸೀಂ, ಫಿಲಿಪ್ಸ್ ಎಂಬ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಘಟನೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಠಾಣೆಯೆದುರು ಪ್ರತಿಭಟನೆ ಸಹ ನಡೆಸಿದ್ದಾರೆ. ಸಂತೋಷ್ ಹತ್ಯೆ ರಾಜಕೀಯ ಪ್ರೇರಿತ ಕೊಲೆ ಅಂತ ಆರೋಪಿಸಿದ್ದು, ವಸೀಂ ಸ್ಥಳೀಯ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರ ಮಗ, ಅವನಿಗೂ ಬಿಜೆಪಿಗೂ ಆಗುತ್ತಿರಲಿಲ್ಲ. ಹಾಗಾಗಿ ಬಿಜೆಪಿಯ ಪರ ಓಡಾಡುತ್ತಿದ್ದ ಸಂತೋಷ್‍ನನ್ನ ಕೊಲೆಗೈಯ್ಯಲಾಗಿದೆ ಎಂದು ಆರೋಪಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿಯನ್ನು ಸುಧಾರಿಸಿದ್ದಾರೆ.