– ಭುವನಾ ಸಾವಿನ ಬೆನ್ನಲ್ಲೇ ಮತ್ತೊಬ್ಬ ಬಿಎಲ್‌ಒ ನಿಧನ
ಬೆಂಗಳೂರು: ಎಸ್‌ಐಆರ್ (SIR) ಪ್ರಕ್ರಿಯೆಗೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ಬಿಎಲ್‌ಒ(BLO) ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ(Bengaluru) ನಡೆದಿದೆ.
ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಎಲ್‌ಒ ಆಗಿ ಕಾರ್ಯನಿರ್ವಹಿಸುತ್ತಿದ್ದ ನಟರಾಜ್ ಅವರು, ನಿನ್ನೆ (ಜುಲೈ 4) ಮನೆಯಿಂದ ಕರ್ತವ್ಯಕ್ಕೆ ಹೊರಟಿದ್ದ ವೇಳೆ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.ಇದನ್ನೂ ಓದಿ: ದೂದಗಂಗಾ, ವೇದಗಂಗಾ ನದಿಗಳು ಉಕ್ಕಿ ಹರಿದು 4ಕ್ಕೂ ಹೆಚ್ಚು ಸೇತುವೆಗಳು ಜಲಾವೃತ
ನಿನ್ನೆಯಷ್ಟೇ ತುಮಕೂರಿನ ಗೂಳೂರು ಬಳಿ ಎಸ್‌ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಭುವನಾ ಅವರ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಅದರ ಬೆನ್ನಲ್ಲೇ ಹೃದಯಾಘಾತದಿಂದ ಮತ್ತೊಬ್ಬ ಬಿಎಲ್‌ಒ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭುವನಾಗೆ ಮದುವೆ ಮಾಡೋಕೆ ಹುಡುಗನ ಹುಡುಕುತ್ತಿದ್ದೆವು, ಈಗ ಅವಳೇ ಇಲ್ಲ: ದೊಡ್ಡಮ್ಮ ಕಣ್ಣೀರು
