ಶಿವಮೊಗ್ಗ: ಎಸ್‌ಐಆರ್ (SIR) ಕಾರ್ಯಚರಣೆ ವೇಳೆ ಮತ್ತೋರ್ವ ಬಿಎಲ್‌ಒ (BLO) ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ.
ಭದ್ರಾವತಿ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತ BLO. ಮಂಜುಳಾ ಅವರು ಅರಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್‌ಐಆರ್ ಕೆಲಸ ಮಾಡುತ್ತಿದ್ದರು. ಈ ವೇಳೆ ಇಂದು (ಜು.6) ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದ್ದಾರೆ.
ಅವರ ಜೊತೆ ಕೆಲಸ ಮಾಡುತ್ತಿದ್ದ ಗ್ರಾಮ ಆಡಳಿತ ಸಿಬ್ಬಂದಿ ಹಾಗೂ ಸಹಾಯಕರು ಕೂಡಲೇ ಅವರನ್ನು ಅರಬಿಳಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಭದ್ರಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಯುವಕನಿಗೆ ಪೊಲೀಸ್ ಠಾಣೆ ಎದುರೇ ಚಾಕು ಇರಿದ ಯುವತಿ ಮಾವ
ಮಾಹಿತಿ ತಿಳಿಯುತ್ತಿದ್ದಂತೆ ತಹಸೀಲ್ದಾರ್ ಪ್ರದೀಪ್ ದೇವಗಿರಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಮಂಜುಳಾ ಅವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.ಇದನ್ನೂ ಓದಿ: ಆರ್ಥಿಕ ಸಂಕಷ್ಟದಲ್ಲಿದ್ದ ವೈಶಾಕ್ – ಸ್ನೇಹಿತನಿಗೆ ಆಗಾಗ ಹಣ ನೀಡ್ತಿದ್ದ ನಟಿ ಕೃಷಿ ತಾಪಂಡ
