ಚಿತ್ರದುರ್ಗ: ಮುರುಘಾಶ್ರೀ (Murugha Shree) ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಮಠದ ಆವರಣದ ಹಾಸ್ಟೆಲ್ ನಲ್ಲಿ ಇಬ್ಬರು ಬಾಲಕಿಯರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ (Chitradurga Police Station) ಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಾಲ್ಕೂವರೆ ವರ್ಷದ ಓರ್ವ ಬಾಲಕಿ, 16 ವರ್ಷದ ಮತ್ತೋರ್ವ ಹುಡುಗಿ ಪತ್ತೆಯಾಗಿದೆ. ಇಬ್ಬರು ಬಾಲಕಿಯರ ಬಗ್ಗೆ ಮಡಿಲು ಯೋಜನೆಗೆ ಮಾಹಿತಿ ದಾಖಲಿಸದೆ ಅಕ್ರಮವಾಗಿ ಸೇರಿಸಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡದೆ ಅಕ್ರಮ ಹಾಗೂ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬರುತ್ತಿದೆ.
ಮುರುಘಾಶ್ರೀ ವಿರುದ್ಧ ಆಗಸ್ಟ್ 26ರಂದು ಫೋಕ್ಸೋ ಪ್ರಕರಣ ಹಿನ್ನೆಲೆ ಹಾಸ್ಟೆಲ್‍ನಲ್ಲಿದ್ದ ಮಕ್ಕಳು ಬೇರೆಡೆ ಶಿಫ್ಟ್ ವೇಳೆ ಇಬ್ಬರು ಬಾಲಕಿಯರು ಪತ್ತೆಯಾಗಿದ್ದಾರೆ. ಬಾಲಕಿಯರ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡದೆ ಅಕ್ರಮ ಹಿನ್ನೆಲೆ ದೂರು ದಾಖಲಿಸಲಾಗಿದೆ. ಇದನ್ನೂ ಓದಿ: 2ನೇ ಪೋಕ್ಸೋ ಕೇಸಲ್ಲಿ ಮುರುಘಾಶ್ರೀಗೆ ಸಂಕಷ್ಟ- ಮೈಸೂರಲ್ಲಿ ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
ಸಾಮಾಜಿಕ ಹೋರಾಟಗಾರ ಮಧುಕುಮಾರ್ ಈ ಬಗ್ಗೆ ಸಿಡಬ್ಲೂಸಿ, ಎಸ್ಪಿ, ಡಿಸಿಗೆ ದೂರು ನೀಡಿದ್ದರು. ಇದನ್ನು ಪರಿಶೀಲಿಸಿ ಮಕ್ಕಳ ರಕ್ಷಣಾ ಘಟಕ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ 2ನೇ ಫೋಕ್ಸೋ ಪ್ರಕರಣ- ಸಂತ್ರಸ್ತ ಬಾಲಕಿ, ತಾಯಿ ಹೇಳಿಕೆಯಲ್ಲಿ ಗೊಂದಲ