ಹೈದರಾಬಾದ್: ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಂತರ ಅನಾರೋಗ್ಯಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್‍ನ ಪೆಟ್ಲಾ ಬುರ್ಜ್‍ನಲ್ಲಿರುವ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಈ ವೇಳೆ ಕೆಲವು ತೊಡಕುಗಳು ಕಾಣಿಸಿಕೊಂಡಾಗ ಆಕೆಯನ್ನು ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಮಹಿಳೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್
Advertisement
Advertisement
ಮಹಿಳೆಯ ಸಾವಿಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಆದರೆ ವೈದ್ಯಕೀಯ ಶಿಕ್ಷಣ ನಿರ್ದೇಶಕ ರಮೇಶ್ ರೆಡ್ಡಿ ಪೆಟ್ಲಾ ಬುರ್ಜ್ ಆಸ್ಪತ್ರೆಗೆ ಧಾವಿಸಿ ಸೂಪರಿಂಟೆಂಡೆಂಟ್ ಮತ್ತು ಇತರ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಸಭೆ ನಡೆಸಿದರು. ಮಹಿಳೆ ಸಾವಿಗೆ ಕಾರಣವೇನು ಎಂಬುವುದರ ಬಗ್ಗೆ ಅಧಿಕಾರಿಗಳು ಕೂಡ ಇಲ್ಲಿಯವರೆಗೂ ಯಾವುದೇ ಹೇಳಿಕೆ ನೀಡಿಲ್ಲ.
Advertisement
Advertisement
ರಂಗಾ ರೆಡ್ಡಿ ಜಿಲ್ಲೆಯ ಸಂತಾನ ಹರಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಡಬಲ್ ಪಂಕ್ಚರ್ ಲ್ಯಾಪರೊಸ್ಕೋಪಿ (ಡಿಪಿಎಲ್)ಗೆ ಒಳಗಾಗಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ಇನ್ನೂ ಮೂವತ್ತು ಮಹಿಳೆಯರು ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಒಳ ಉಡುಪು ಖರೀದಿಸಲು ದೆಹಲಿಗೆ ಹೋಗಿದ್ದೆ- ಜಾರ್ಖಂಡ್ ಸಿಎಂ ಸಹೋದರನ ವಿವಾದಾತ್ಮಕ ಹೇಳಿಕೆ
ರಂಗಾ ರೆಡ್ಡಿ ಜಿಲ್ಲೆಯ ಇಬ್ರಾಹಿಂ ಪಟ್ಟಣಂನಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಆಗಸ್ಟ್ 25 ರಂದು ನಡೆದ ಸ್ತ್ರೀ ಸಂತಾನ ಹರಣ ಶಿಬಿರದಲ್ಲಿ ಮಹಿಳೆಯರು ಡಿಪಿಎಲ್ ಮಾಡಿಸಿಕೊಂಡಿದ್ದರು. ನಾಲ್ವರು ತೀವ್ರವಾದ ಗ್ಯಾಸ್ಟ್ರೋಎಂಟರೈಟಿಸ್‍ನಿಂದ ಬಳಲುತ್ತಿದ್ದರು ಮತ್ತು ಇದಕ್ಕೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ್ದರು.
ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ಪರವಾನಿಗೆಯನ್ನು ಸರ್ಕಾರ ಅಮಾನತುಗೊಳಿಸಿದೆ. ಇದು ಆಸ್ಪತ್ರೆಯ ಅಧೀಕ್ಷಕರನ್ನು ಜೀವಮಾನದ ಅಮಾನತುಗೊಳಿಸಿದೆ. ಈ ಕುರಿತಂತೆ ಸಾರ್ವಜನಿಕ ಆರೋಗ್ಯ ಇಲಾಖೆಯ ನಿರ್ದೇಶಕ ಡಾ.ಜಿ.ಶ್ರೀನಿವಾಸರಾವ್ ಅವರಿಂದಲೂ ತನಿಖೆಗೆ ಸರ್ಕಾರ ಆದೇಶಿಸಿದೆ. ಗರಿಷ್ಠ ಎಫ್‍ಪಿ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಮೂಲಕ ದಾಖಲೆ ಸೃಷ್ಟಿಸುವ ಪ್ರಯತ್ನಗಳು ಸಾವಿಗೆ ಕಾರಣವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.