– 7.1 ತೀವ್ರತೆಯ ಭೂಕಂಪ
– ಒಂದೇ ವಾರದಲ್ಲಿ ಜಪಾನ್‌ನಲ್ಲಿ ಸಂಭವಿಸಿದ ಎರಡನೇ ಪ್ರಬಲ ಭೂಕಂಪ
ಟೋಕಿಯೋ: ಜಪಾನ್‌ನ (Japan Earthquake) ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಸಮುದ್ರ ಮಟ್ಟದಿಂದ 10 ಕಿಲೋಮೀಟರ್ ಆಳದಲ್ಲಿತ್ತು ಎಂದು ಜಪಾನ್ ಹವಾಮಾನ ಇಲಾಖೆ (JMA) ತಿಳಿಸಿದೆ.
ಭೂಕಂಪದ ಕಂಪನಕ್ಕೆ ಹಲವು ಕಟ್ಟಡಗಳು ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದ ಬಳಿಕ ಜಪಾನ್ ಸರ್ಕಾರ ಸುನಾಮಿ ಎಚ್ಚರಿಕೆ ನೀಡಿದೆ. ಒಂದು ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಜನರು ತಕ್ಷಣ ಸುರಕ್ಷಿತ ಹಾಗೂ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಭೂಕಂಪದ ಬಳಿಕ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಯಾವುದೇ ತಕ್ಷಣದ ಅಸಹಜತೆ ಕಂಡುಬಂದಿಲ್ಲ ಎಂದು ಪರಮಾಣು ನಿಯಂತ್ರಣ ಪ್ರಾಧಿಕಾರ ತಿಳಿಸಿದೆ. ಆದರೂ ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
ಕುಮಾಮೊಟೊ, ನಾಗಸಾಕಿ, ಕಾಗೋಶಿಮಾ, ಫುಕುವೋಕಾ, ಸಾಗಾ, ಓಯಿಟಾ ಹಾಗೂ ಮಿಯಾಜಾಕಿ ಸೇರಿದಂತೆ ಹಲವು ಪ್ರಾಂತ್ಯಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ. ಇದು ಒಂದು ವಾರದೊಳಗೆ ಜಪಾನ್‌ನಲ್ಲಿ ಸಂಭವಿಸಿದ ಎರಡನೇ ಪ್ರಬಲ ಭೂಕಂಪವಾಗಿದೆ. ಜೂನ್ 25ರಂದು ಉತ್ತರ ಜಪಾನ್‌ನಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದರೂ ಹೆಚ್ಚಿನ ಹಾನಿ ಆಗಿರಲಿಲ್ಲ.ಇದನ್ನೂ ಓದಿ: SIR ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ: ಹೈಕೋರ್ಟ್
Video shows the impact of the massive 7.1 earthquake in Japan. pic.twitter.com/6fLrO0MfoA
— Vani Mehrotra (@vani_mehrotra) July 28, 2026
ಪೆಸಿಫಿಕ್‌ನ ‘ರಿಂಗ್ ಆಫ್ ಫೈರ್’ ಪ್ರದೇಶದಲ್ಲಿರುವ ಜಪಾನ್ ವಿಶ್ವದಲ್ಲೇ ಹೆಚ್ಚು ಭೂಕಂಪ ಸಂಭವಿಸುವ ದೇಶಗಳಲ್ಲಿ ಒಂದಾಗಿದೆ. 2011ರಲ್ಲಿ ಸಂಭವಿಸಿದ್ದ 9.0 ತೀವ್ರತೆಯ ಭೂಕಂಪ ಮತ್ತು ಸುನಾಮಿ ಸಾವಿರಾರು ಜೀವಗಳನ್ನು ಬಲಿ ಪಡೆದಿದ್ದ ಘಟನೆ ಇನ್ನೂ ಜನರ ಮನಸ್ಸಿನಲ್ಲಿ ಹಸಿಯಾಗಿಯೇ ಉಳಿದಿದೆ.ಇದನ್ನೂ ಓದಿ: ಸಂಪುಟ ವಿಸ್ತರಣೆ ಚರ್ಚೆ – ಶಾಸಕ ಹೆಚ್.ಸಿ.ಬಾಲಕೃಷ್ಣ ಟೆಂಪಲ್ ರನ್
