ಶ್ರೀನಗರ: ಭಾನುವಾರ ಭಯೋತ್ಪಾದಕರ (Terrorists) ಗುಂಡಿನ ದಾಳಿಗೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿಯಲ್ಲಿ (Rajouri) ನಡೆದಿತ್ತು. ಇಂದು ದಾಳಿ ನಡೆದ ಮನೆ ಬಳಿಯೇ ಇನ್ನೊಂದು ಸ್ಫೋಟ (Blast) ಸಂಭವಿಸಿದ್ದು, ಮಗು ಸಾವನ್ನಪ್ಪಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ನಿನ್ನೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಉಗ್ರರು ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೂರು ಮನೆಗಳಲ್ಲಿ ದಾಳಿ ನಡೆಸಿದ್ದ ಉಗ್ರರು ನಾಲ್ವರನ್ನು ಕೊಂದಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಶಂಕಿತ ಉಗ್ರರ ದಾಳಿ- ಮೂವರು ನಾಗರಿಕರು ಸಾವು
Advertisement
Advertisement
ಇಂದು ನಡೆದ ಸ್ಫೋಟ ಡ್ಯಾಂಗ್ರಿ ಗ್ರಾಮದಲ್ಲಿ ವರದಿಯಾಗಿದೆ. ಇದು ನಿನ್ನೆ ಗುಂಡಿನ ದಾಳಿ ನಡೆದ ಮನೆಗಳ ಸಮೀಪವಿದೆ ಎನ್ನಲಾಗಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಗಾಯಗೊಂಡಿರುವ ಐವರ ಪೈಕಿ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದಲ್ಲಿ ಗಾಯಗೊಂಡ ಎಲ್ಲರನ್ನೂ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಜೈಲಿನ ಮೇಲೆ ಗುಂಡಿನ ದಾಳಿ – 10 ಭದ್ರತಾ ಸಿಬ್ಬಂದಿ ಸೇರಿ 14 ಮಂದಿ ಸಾವು, 24 ಕೈದಿಗಳು ಎಸ್ಕೇಪ್
Advertisement
ಭದ್ರತಾ ಪಡೆಗಳು ಘಟನಾ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದು, ಈ ವೇಳೆ ಇನ್ನೊಂದು ಶಂಕಿತ ಸುಧಾರಿತ ಸ್ಫೋಟಕ ಸಾಧನವನ್ನು (IED) ಪತ್ತೆಮಾಡಿದ್ದಾರೆ. ಭಯೋತ್ಪಾದಕರು ನಿರ್ದಿಷ್ಟ ಸಮುದಾಯದವರ ಮೇಲೆ ದಾಳಿ ನಡೆಸುತ್ತಿದ್ದು, ಅವರ ಪತ್ತೆ ಹಚ್ಚಲು ಹೆಚ್ಚುವರಿ ಸಿಬ್ಬಂದಿಯನ್ನು ಸೇರಿಸಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.