ನಿನ್ನೆಯಷ್ಟೇ ಸ್ಯಾಂಡಲ್ವುಡ್ (Sandalwood) ನಟ ಉಪೇಂದ್ರ (Upendra) ಮೇಲೆ ಎಫ್ಐಆರ್ (FIR) ದಾಖಲಾಗಿತ್ತು. ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ (Madhusudan) ಅವರು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.
Advertisement
ಇದೀಗ ಉಪೇಂದ್ರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ರಣಧೀರ ಪಡೆ ಹರೀಶ್ (Harish) ಕೊಟ್ಟ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಇದೂವರೆಗೂ ಉಪೇಂದ್ರ ವಿರುದ್ದ ಎರಡು ಎಫ್ ಐ ಆರ್ ದಾಖಲಾಗಿದ್ದು, ವಿಚಾರಣೆ ಎದುರಿಸಬೇಕಾಗಿದೆ. ಇದನ್ನೂ ಓದಿ:ಸಮುದಾಯವೊಂದನ್ನು ನಿಂದಿಸಿದ್ದಕ್ಕೆ ಉಪೇಂದ್ರ ಮೇಲೆ ಎಫ್ಐಆರ್ ದಾಖಲು
Advertisement
Advertisement
ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಉಪೇಂದ್ರ ಮೇಲೆ ಪ್ರಕರಣ ದಾಖಲಾಗಿದ್ದು, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದೆ. ಸಮುದಾಯವೊಂದನ್ನು ನಿಂದಿಸಿದ ಆರೋಪವನ್ನ ಉಪೇಂದ್ರ ಅವರು ಎದುರಿಸುತ್ತಿದ್ದಾರೆ. ಉಪೇಂದ್ರ ವಿರುದ್ಧ ಕಾನೂನು ಹೋರಾಟಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಹರೀಶ್ ಮುಂದಾಗಿದ್ದಾರೆ.
Advertisement
ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ, ಮೊದಲಿಗೆ ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ತಮ್ಮದೇ ವಾರಗೆಯ ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತವನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು. ಬಳಿಕ ಮಾತು ಮುಂದುವರೆಸಿ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದರು. ಉಪೇಂದ್ರರ ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
Web Stories