ದೊಡ್ಡ ಬಜೆಟ್ಟಿನ ಚಿತ್ರಗಳ ಅಬ್ಬರದ ನಡುವೆ ಕನ್ನಡದ ಕೆಲವು ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಂಚರಿಸಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿ ಕನ್ನಡ ಚಿತ್ರೋದ್ಯಮದ ಕೀರ್ತಿ ಪತಾಕೆಯನ್ನು ಹಾರಿಸಿವೆ. ಅದರಲ್ಲಿ ನಮ್ಮ ರಿಷಬ್ ಶೆಟ್ಟಿ (Rishabh Shetty) ಸಂಸ್ಥೆಯ ‘ಶಿವಮ್ಮ’ ಚಿತ್ರ ಪ್ರಪಂಚಾದ್ಯಂತ ತನ್ನ ತೆಕ್ಕೆಗೆ ಪ್ರಶಸ್ತಿ, ಪ್ರಶಂಸೆಯನ್ನು ಗಳಿಸಿ ತನ್ನ ವರ್ಲ್ಡ್ ಟೂರಿನ ಮ್ಯಾರಥಾನ್ ಅನ್ನು ಮುಂದುವರಿಸಿದೆ.
Advertisement
ಇದು ಜೈ ಶಂಕರ್ ಆರ್ಯರ್ (Jai Shankar Aryar), ನಿರ್ದೇಶನದ ಚೊಚ್ಚಲ ಚಿತ್ರ. ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೆ ವಿದೇಶಿಗರ ಪ್ರೀತಿಗೂ ಪಾತ್ರವಾದ ಈ ಸಿನಿಮಾ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಸಂಸ್ಥೆಯ ಹೆಮ್ಮೆಯ ಕೊಡುಗೆ. ಇದನ್ನೂ ಓದಿ:ಕೊನೆಗೂ ಮದುವೆ ಬಗ್ಗೆ ಸಿಕ್ರೇಟ್ ಬಿಟ್ಟುಕೊಟ್ಟ ವಿಜಯ್ ದೇವರಕೊಂಡ
Advertisement
Advertisement
ಈವರೆಗೂ ಶಿವಮ್ಮ (Shivamma) ಗೆದ್ದ ಪ್ರಶಸ್ತಿಗಳ ಪಟ್ಟಿ ದೊಡ್ಡದಿದೆ. ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022, ಯಂಗ್ ಜೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022, ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಗ್ರಾಂಡ್ ಪ್ರಿಕ್ಸ್ ಅಟ್ ಜೆರ್ಕೋಲೊ ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ, ಸ್ವಿಟ್ಜರ್ಲ್ಯಾಂಡ್ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ , ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಸ್ಪೀಡನ್ ಫಿಲ್ಮ್ ಫೆಸ್ಟ್ ಮುಂಚಿಯನ್, ಮ್ಯುನಿಚ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ , ರಷ್ಯಾ ಇಮೆಜಿನ್ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡ ಇಂಡಿಯನ್ ಪಿಲ್ಮ್ ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೊವ್ಸ್ಕಿ ಅಂತರ್ರಾಷ್ಟ್ರೀಯ ಚಿತ್ರೋತ್ಸವ ಮುಂತಾದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
Advertisement
ಈ ಸಿನಿಮಾದ ಬಗ್ಗೆ ರಿಷಬ್ ಶೆಟ್ಟಿ ಹೆಮ್ಮೆಯಿಂದಲೇ ಮಾತನಾಡಿದ್ದಾರೆ. ಇಂಥದ್ದೊಂದು ಸಿನಿಮಾ ತಮ್ಮದೇ ಬ್ಯಾನರ್ ನಲ್ಲಿ ಬಂದಿದ್ದು, ಸಹಜವಾಗಿಯೇ ಅವರಿಗೆ ಸಂಭ್ರಮ ತಂದಿದೆ. ಈ ಸಿನಿಮಾ ಇನ್ನೂ ಹಲವು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಲಿ ಎಂದು ನಿರ್ದೇಶಕರಿಗೆ ರಿಷಬ್ ಹಾರೈಸಿದ್ದಾರೆ.
Web Stories