ಬಾಗಲಕೋಟೆ: ನಿಂತ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
Advertisement
ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ನಿಂತ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಲಾರಿ ಚಾಲಕ ಶಂಕ್ರಯ್ಯ ಪೂಜಾರ್(35) ಗುಡೂರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.0.57- 836 ಹೊಸ ಕೊರೊನಾ ಕೇಸ್, 15 ಸಾವು
Advertisement
Advertisement
ಈ ಲಾರಿ ಇಳಕಲ್ ನಿಂದ ಮಾರ್ಬಲ್ಸ್ ಹೊತ್ತು ಬಾಗಲಕೋಟೆ ಕಡಗೆ ಬರ್ತಿತ್ತು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಾಗಲಕೋಟೆಯ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮೃತನಾಗಿರುವುದು ಚಾಲಕನೊ ಅಥವಾ ಕ್ಲೀನರ್ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.