ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಐದು ಅಂತಸ್ತಿನ ಬಿಲ್ಡಿಂಗ್ ಭಾಗಶಃ ಭಸ್ಮವಾದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರೋಡ್‌ನಲ್ಲಿ ನಡೆದಿದೆ.
ಮಧ್ಯರಾತ್ರಿ 12 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಕಟ್ಟಡದಲ್ಲಿ ಸಿಲುಕಿದ್ದ ಮೂವರು ಭದ್ರತಾ ಸಿಬ್ಬಂದಿಯನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ. ಫರ್ನಿಚರ್ ಅಂಗಡಿ, ಕೋಚಿಂಗ್ ಸೆಂಟರ್, ಐಟಿ ಕಂಪನಿ (IT Company) ಸಂಪೂರ್ಣ ಸುಟ್ಟು ಹೋಗಿದೆ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ – ಒಬ್ಬಳ ಮೇಲಿನ ದ್ವೇಷಕ್ಕೆ ನಾಲ್ವರು ಬಲಿ!
Advertisement
Advertisement
ಅವಘಡಕ್ಕೆ ನಿಖರ ಕಾರಣ ತಿಳಿದು ಬಾರದೇ ಇದ್ದರೂ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ರಜೆ ಮತ್ತು ರಾತ್ರಿ ಈ ಘಟನೆ ಸಂಭವಿಸಿದ ಕಾರಣ ಹೆಚ್ಚಿನ ಜನ ಕಟ್ಟಡದಲ್ಲಿ ಇರಲಿಲ್ಲ.
Advertisement
ನೆಲ ಹಾಗೂ ಮೊದಲ ಮಹಡಿಯಲ್ಲಿ ಫರ್ನಿಚರ್ ಅಂಗಡಿ, ಎರಡನೇ ಮಹಡಿಯಲ್ಲಿ ಕಾಮೆಡ್ ಕೋಚಿಂಗ್ ಸೆಂಟರ್, 3 ಮತ್ತು 4ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್ ಹೆಸರಿನ ಸಾಫ್ಟ್‌ವೇರ್ ಕಂಪನಿ ಕಾರ್ಯನಿರ್ವಹಿಸುತ್ತಿತ್ತು.
Advertisement
ಅವಘಡದ ಮಾಹಿತಿ ಪಡೆದು ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿದೆ.