ಬೆಂಗಳೂರು: ಸ್ಯಾಂಡಲ್‍ವುಡ್ ದೊಡ್ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ರಾಜ್‍ಕುಮಾರ್ ಅವರ ಮೊಮ್ಮಗ ಹಾಗೂ ನಟ ರಾಘವೇಂದ್ರ ರಾಜ್‍ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್‍ಕುಮಾರ್ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ.
ಯುವ ರಾಜ್‍ಕುಮಾರ್ ಅವರ ನಿಶ್ಚಿತಾರ್ಥ ಗುರುವಾರ ಜರುಗಲಿದೆ. ಮೈಸೂರು ಮೂಲದ ಶ್ರೀದೇವಿ ಭೈರಪ್ಪ ಅವರ ಜೊತೆ ಯುವ ರಾಜ್‍ಕುಮಾರ್ ನಿಶ್ಚಿತಾರ್ಥ ಮೈಸೂರಿನ ಹೋಟಲ್ ವೊಂದರಲ್ಲಿ ನಡೆಯಲಿದೆ. ಈ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಮತ್ತು ಆಪ್ತ ಬಂಧುಗಳು ಮಾತ್ರ ಭಾಗಿಯಾಗಲಿದ್ದಾರೆ.
Advertisement
Advertisement
ಯುವ ರಾಜ್‍ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ಇಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. ಇವರ ಸ್ನೇಹ ಈಗ ಪ್ರೀತಿಗೆ ತಿರುಗಿದೆ. ಈಗ ಇಬ್ಬರ ಕುಟುಂಬದ ಸಮ್ಮುಖದಲ್ಲಿ ಈ ಜೋಡಿ ಈಗ ನಿಶ್ಚಿತಾರ್ಥ ನೆರವೇರಲಿದೆ.
Advertisement
ಈ ಹಿಂದೆ ಯುವ ಅವರ ಹೆಸರು ಗುರು ರಾಜ್‍ಕುಮಾರ್ ಆಗಿದ್ದು, ಈಗ ಯುವ ರಾಜ್‍ಕುಮಾರ್ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಯುವ ರಾಜ್‍ಕುಮಾರ್ ಇದುವರೆಗೂ ಯಾವ ಸಿನಿಮಾದಲ್ಲೂ ಹೀರೋ ಆಗಿ ಕಾಣಿಸಿಕೊಳ್ಳಲಿಲ್ಲ. ಆದರೆ ತಮ್ಮ ಹೋಮ್ ಬ್ಯಾನರ್‍ನಲ್ಲಿ ಬರುವ ಚಿತ್ರಗಳ ತೆರೆ ಹಿಂದೆ ಕೆಲಸ ಮಾಡಿದ್ದಾರೆ. ಸದ್ಯ ಯುವ ಮದುವೆ ಆದ ನಂತರ ಹೀರೋ ಆಗಿ ಕಾಣಿಸಿಕೊಳ್ಳಿದ್ದಾರೆ ಎಂದು ಹೇಳಲಾಗಿದೆ.