ಬೆಂಗಳೂರು: ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ (Kitturu Chennamma) ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಇಂದು (ಅ,2) ಬೆಳಗಾವಿ (Belagavi) ಜಿಲ್ಲಾ ಆಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (Kitturu Development Authority) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ (Kannada And Culture Department) ವತಿಯಿಂದ ವಿಧಾನಸೌಧ ಭವ್ಯ ಮೆಟ್ಟಿಲುಗಳ ಬಳಿ ಹಮ್ಮಿಕೊಳ್ಳಲಾದ “ಕಿತ್ತೂರು ವಿಜಯೋತ್ಸವದ ಜ್ಯೋತಿ”ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.ಇದನ್ನೂ ಓದಿ: HMT ಕ್ಯಾಂಪಸ್‌ನಲ್ಲಿ ಪೌರ ಕಾರ್ಮಿಕರೊಂದಿಗೆ ಕಸ ಗುಡಿಸಿದ ಎಚ್‌ಡಿಕೆ
Advertisement
Advertisement
ಚಾಲನೆ ನೀಡಿ ಮಾತನಾಡಿದ ಅವರು, 2024ರ ಕಿತ್ತೂರು ಚೆನ್ನಮ್ಮ ಉತ್ಸವ ಇದೇ ತಿಂಗಳ 23, 24 ಹಾಗೂ 25 ರಂದು ಕಿತ್ತೂರಿನಲ್ಲಿ ನಡೆಯಲಿದ್ದು, ಕಿತ್ತೂರು ವಿಜಯವಾಗಿ 200 ವರ್ಷಗಳಾಗುತ್ತವೆ. ಇದರ ಅಂಗವಾಗಿ ಇಂದು ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಿತ್ತೂರು ವಿಜಯೋತ್ಸವದ ಜ್ಯೋತಿಯು ಇಲ್ಲಿಂದ ಹೊರಟು ಎಲ್ಲಾ ಜಿಲ್ಲೆಗಳ ಮೂಲಕ ಹಾದು ಕಿತ್ತೂರನ್ನು ತಲುಪಲಿದೆ ಎಂದರು.
Advertisement
ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರೆಂದರೆ ಅದು ಕಿತ್ತೂರು ರಾಣಿ ಚನ್ನಮ್ಮ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ (Sangolli Rayanna) ಕೂಡ ರಾಣಿ ಚನ್ನಮ್ಮನ ಸೈನ್ಯದಲ್ಲಿದ್ದರು. ಬ್ರಿಟಿಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದು ತಿಳಿಸಿದರು.ಇದನ್ನೂ ಓದಿ: ಸತತ ಪ್ರಯತ್ನದಿಂದ ಮಾತ್ರ ಭಾರತವನ್ನು ಸ್ವಚ್ಛಗೊಳಿಸಲು ಸಾಧ್ಯ: ಮೋದಿ
Advertisement
ಕಿತ್ತೂರಿನಲ್ಲಿ ಆಚರಿಸಲ್ಪಡುವ ಕಿತ್ತೂರು ಉತ್ಸವಕ್ಕೆ (Kitturu Utsava) ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವು ಮತ್ತು ಅಗತ್ಯ ಅನುದಾನವನ್ನು ನೀಡುತ್ತಿದೆ. ಇಂದು ಮಹಾತ್ಮ ಗಾಂಧಿಯವರ ಜಯಂತಿ ಜೊತೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದರು.
ಗಾಂಧೀಜಿಯವರು ದೇಶದ ಸ್ವಾತಂತ್ರ‍್ಯ ಹೋರಾಟಕ್ಕೆ ನೇತೃತ್ವ ವಹಿಸಿ ಶಾಂತಿಯುತವಾಗಿ ಸ್ವಾತಂತ್ರ‍್ಯ ದೊರಕಿಸಿಕೊಟ್ಟರು. 1920 ರಿಂದ 1947ರ ವರೆಗಿನ ಸ್ವಾತಂತ್ರ‍್ಯ ಹೋರಾಟದ ನೇತೃತ್ವ ವಹಿಸಿದ್ದರು ಎಂದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ, ಬೆಳಗಾವಿ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕಿತ್ತೂರು ಶಾಸಕ ಬಾಬಾ ಸಾಹೇಬ ಪಾಟೀಲ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಇದನ್ನೂ ಓದಿ: ಹೆಣ್ಣು ಮಗು ಎಂದು ತಿಳಿಸಿ, ಸತ್ತ ಗಂಡು ಮಗು ನೀಡಿದ್ದಾರೆ : ಆಸ್ಪತ್ರೆಯ ವಿರುದ್ಧ ತಾಯಿ ಆಕ್ರೋಶ