LatestLeading NewsMain Post

ಬಿಜೆಪಿಯಲ್ಲಿ ಮತ್ತೆ ಆಪರೇಷನ್ ಪಾಲಿಟಿಕ್ಸ್ – ಹಳೆ ಮೈಸೂರು ಭಾಗ ಟಾರ್ಗೆಟ್

ಬೆಂಗಳೂರು: ಅಸೆಂಬ್ಲಿ ಎಲೆಕ್ಷನ್‍ಗೆ ವರ್ಷ ಬಾಕಿಯಿರುವಾಗಲೇ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಸದ್ದು ಮಾಡುತ್ತಿದೆ. 150 ಸ್ಥಾನ ಗೆಲ್ಲುವ ಸಲುವಾಗಿ ಬಿಜೆಪಿ, ಹಳೆ ಮೈಸೂರು ಭಾಗದಲ್ಲಿ ಆಪರೇಷನ್‍ಗೆ ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಹಳೆ ಮೈಸೂರು ಭಾಗದಲ್ಲಿ ಪಕ್ಷದ ಶಕ್ತಿ ಬಗ್ಗೆ ಸ್ರೀಕೆಟ್ ರಿಪೋರ್ಟ್ ಪಡೆದಿರುವ ಬಿಜೆಪಿ ಅಮಿತ್ ಶಾ, ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ. ಹಳೆ ಮೈಸೂರಿನ 87 ಕ್ಷೇತ್ರಗಳಲ್ಲಿ 10ರಲ್ಲಿ ಅಷ್ಟೇ ಬಿಜೆಪಿ ಸ್ಟ್ರಾಂಗ್ ಇದೆ. ಕ್ಷೀಣವಾಗಿರುವ 43 ಕ್ಷೇತ್ರಗಳಲ್ಲಿ ಪಕ್ಷ ಸುಧಾರಿಸಲು ಬೇರೆ ಪಕ್ಷದವರನ್ನು ಸೆಳೆಯಲು ಸೂಚಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಚಾಮರಾಜನಗರ, ರಾಮನಗರಲ್ಲಿ ಆಪರೇಷನ್ ಕಮಲಕ್ಕೆ ಪ್ಲಾನ್ ಮಾಡಿದ್ದಾರೆ.ಇದನ್ನೂ ಓದಿ: ಪ್ರಭು ಚವ್ಹಾಣ್ ಬಳಿ ಸಾಕ್ಷ್ಯ ಕೇಳಲ್ಲ ಯಾಕೆ – ಅರಗಗೆ ಪ್ರಿಯಾಂಕ್‌ ಖರ್ಗೆ ಸವಾಲು 

ಪಕ್ಷಕ್ಕೆ ಬರೋ ಹಾಲಿ, ಮಾಜಿ ಸಂಸದರು, ಶಾಸಕರಿಗೆ ಆಫರ್ ಮೇಲೆ ಆಫರ್ ನೀಡ್ತಿದ್ದಾರೆ. ಆಪರೇಷನ್ ಕಮಲದ ಬಗ್ಗೆ ಬಿಜೆಪಿ ನಾಯಕರು ಸುಳಿವು ನೀಡಿದ್ದಾರೆ. ಬೆನ್ನಲ್ಲೇ, ಜಿ.ಟಿ ದೇವೇಗೌಡ ಸಿಎಂ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿ ರಾಜಕೀಯವಾಗಿ ಬಾರಿ ಕುತೂಹಲ ಮೂಡಿಸಿದೆ.

ನಿನ್ನೆ ಬೆಂಗಳೂರು ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಗಳೊಂದಿಗೆ ಮಾತನಾಡಿ, ಹಳೇ ಮೈಸೂರು ಭಾಗದಲ್ಲಿ ತುಂಬಾ ಜನ ನಮ್ಮ ಪಕ್ಷ ಹಾಗೂ ಸಿಎಂ ಸಂಪರ್ಕದಲ್ಲಿ ಇದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ನಾವು ತೆಗೆದುಕೊಂಡ ನಿರ್ಣಯದ ಮೇಲೆ ವರಿಷ್ಠರು ಸಹಕಾರ ಕೊಡುತ್ತಾರೆ. ನಾನು ಮತ್ತು ಮುಖ್ಯಮಂತ್ರಿಗಳು ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಪಕ್ಷ ಸೇರ್ಪಡೆಗೆ ಅಮಿತ್ ಶಾ ಬರ್ತಾರೆ ಅಂತ ಏನೂ ಇಲ್ಲ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಇದಕ್ಕೆ ರಾಷ್ಟ್ರೀಯ ನಾಯಕರ ಒಪ್ಪಿಗೆ ಪಡೆದುಕೊಳ್ಳುತ್ತೇವೆ. ಬೇರೆ ಬೇರೆ ಪಕ್ಷಗಳ ಹತ್ತಾರು ಜನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ನಾಯಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ಯಾರನ್ನು ತಗೋಬೇಕು, ಅಲ್ಲಿರುವ ಸಮಸ್ಯೆಗಳ ಅವಲೋಕನ ಮಾಡಿಕೊಂಡು ನಿರ್ಧಾರ ಎಲ್ಲವನ್ನೂ ಯೋಚನೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ ಎಂದಿದ್ದರು. ಇದನ್ನೂ ಓದಿ: ಸಂಚಾರದ ವೇಳೆ ಉಗುಳಿದರೂ ಬೀಳುತ್ತೆ ದಂಡ: ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

Leave a Reply

Your email address will not be published.

Back to top button