ರಾಯಚೂರು: ಇಲ್ಲಿನ ನಗರಸಭೆಯ ನಿರ್ಲಕ್ಷ್ಯದಿಂದಾಗಿ ಕಲುಷಿತ ನೀರಿನ ಸೇವನೆಯಿಂದ ಆಟೋ ಚಾಲಕರೊಬ್ಬರು ಮೃತಪಟ್ಟಿದ್ದು, ಇದುವರಗೆ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
Advertisement
ಆಟೋ ಚಾಲಕರಾಗಿದ್ದ ಅರಬ್ ಮೊಹಲ್ಲಾ ನಿವಾಸಿ ಮೊಹಮ್ಮದ್ ನೂರ್ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಾಯಚೂರು ಅಬಕಾರಿ ಪೊಲೀಸರ ದಾಳಿ – 2.77 ಲಕ್ಷ ಮೌಲ್ಯದ ಮದ್ಯ ಜಪ್ತಿ
Advertisement
ನಗರಸಭೆ ಪೂರೈಸುತ್ತಿರುವ ಕಲುಷಿತ ನೀರು ಕುಡಿದು ವಾಂತಿ, ಭೇದಿ ಕಾಣಿಸಿಕೊಂಡಿತ್ತು. ಇದರಿಂದ ಮೊಹಮ್ಮದ್ ನೂರ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
Advertisement
Advertisement
ಈಗಾಗಲೇ ನಗರದ ಮಲ್ಲಮ್ಮ(40) ಮತ್ತು ಅಬ್ದುಲ್ ಗಫಾರ್(43) ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ. ನೂರಾರು ಜನ ಹಾಗೂ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿನ ಸರಣಿ ಮುಂದುವರೆದಿದ್ದರೂ ಎಚ್ಚೆತ್ತುಕೊಳ್ಳದ ನಗರಸಭೆ ವಿರುದ್ಧ ಸಾರ್ವಜನಿಕರಲ್ಲಿ ಆಕ್ರೋಶ ಹೆಚ್ಚಾಗಿದೆ. ಇದರಿಂದ ನಾಗರಿಕ ವೇದಿಕೆಯಿಂದ ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ.