ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ಪಕ್ಷದ ಪಶ್ಚಿಮ ಬಂಗಾಳದ ಅಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ (Chandrima Bhattacharya) ಶನಿವಾರ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ಚುನಾವಣಾ ಸೋಲಿನ ನಂತರ ಭಟ್ಟಾಚಾರ್ಯ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಬಿಜೆಪಿ ವಿರುದ್ಧದ ಚುನಾವಣಾ ಹಿನ್ನಡೆಯ ನಂತರ, ಜೂನ್ 3 ರಂದು ಮಮತಾ ಬ್ಯಾನರ್ಜಿ ಪಕ್ಷದ ಎಲ್ಲಾ ಸಮಿತಿಗಳನ್ನು ವಿಸರ್ಜಿಸಿ ಸಂಘಟನೆಯನ್ನು ಪುನಾರಚಿಸಿದ್ದರು. ಬಳಿಕ ಸುಬ್ರತಾ ಬಕ್ಷಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದರು. ಇದನ್ನೂ ಓದಿ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು
2025ರ ಜೂನ್ 3 ರಂದು ಕಾಲಿಘಾಟ್‌ನಲ್ಲಿ ನಡೆದ ಸಭೆಯಲ್ಲಿ ನನಗೆ ನೀಡಲಾದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ನ ರಾಜ್ಯ ಅಧ್ಯಕ್ಷೆ ಸ್ಥಾನಕ್ಕೆ ನಾನು ಈ ಮೂಲಕ ರಾಜೀನಾಮೆ ನೀಡುತ್ತಿದ್ದೇನೆ. ಪ್ರಸ್ತುತ ನಾನು ಹೊಂದಿರುವ ಎಲ್ಲಾ ಇತರ ಸ್ಥಾನಗಳಿಗೂ ರಾಜೀನಾಮೆ ನೀಡುತ್ತೇನೆ. ಮಮತಾ ಬ್ಯಾನರ್ಜಿ ಅವರನ್ನು ನಾನು ಗೌರವಿಸುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ, ಭಟ್ಟಾಚಾರ್ಯ ಅವರು ತೃಣಮೂಲದ ಬಂಡಾಯ ಬಣದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಚಂದ್ರಿಮಾ ಭಟ್ಟಾಚಾರ್ಯ ಅವರ ರಾಜೀನಾಮೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಮಮತಾ ಬ್ಯಾನರ್ಜಿ ಬಣ ಶಾಸಕ ಕುನಾಲ್ ಘೋಷ್, ʼಮಮತಾ ಬ್ಯಾನರ್ಜಿ ಅವರ ಸರ್ಕಾರದ ಅವಧಿಯಲ್ಲಿ ನೀಡಿದ್ದ ಉತ್ತಮ ಖಾತೆಗಳನ್ನು ಅವರು ಆನಂದಿಸುತ್ತಿದ್ದಾಗ ಏಕೆ ರಾಜೀನಾಮೆ ನೀಡಲಿಲ್ಲʼ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿಎಂ ವಿಜಯ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ಶಾಸಕ ಅರೆಸ್ಟ್
ಚಂದ್ರಿಮಾ ಭಟ್ಟಾಚಾರ್ಯ ಪಶ್ಚಿಮ ಬಂಗಾಳದ ಮಾಜಿ ಸಚಿವೆಯಾಗಿದ್ದು, ಮಮತಾ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾಗಿದ್ದರು.
