ಚೆನ್ನೈ: ತಮಿಳುನಾಡಿನ ಚಿನ್ನಸೇಲಂನ ಕಣಿಯೂರು ಪ್ರದೇಶದ ಖಾಸಗಿ ವಸತಿ ಶಾಲೆಯಲ್ಲಿ 2 ವಾರಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಆತ್ಮಹತ್ಯೆಯಿಂದಾಗಿ ಶಾಲೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಆ ಘಟನೆ ಮಾಸುವುದಕ್ಕೂ ಮೊದಲೇ ಇನ್ನೊಂದು ವಿದ್ಯಾರ್ಥಿನಿ ಸೋಮವಾರ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ತಮಿಳುನಾಡಿನ ತಿರುವಳ್ಳೂರು ಜಿಲ್ಲೆ, ಕಿಲಚೇರಿ ಬಳಿಯ ಸರ್ಕಾರಿ ಅನುದಾನಿತ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯ ಹಾಸ್ಟೆಲ್‌ನಲ್ಲಿ ಇಂದು ಬೆಳಗ್ಗೆ 12ನೇ ತರಗತಿಯ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು
ಇಂದು ಬೆಳಗ್ಗೆ ಶಾಲೆಯಿಂದ ಹಾಸ್ಟೆಲ್‌ಗೆ ಮರಳಿದ್ದ ವಿದ್ಯಾರ್ಥಿನಿ ಮತ್ತೆ ಶಾಲೆಗೆ ಹೋಗದೇ ಇರುವ ಬಗ್ಗೆ ಶಾಲೆಯ ಶಿಕ್ಷಕರು ಹಾಸ್ಟೆಲ್ ವಾರ್ಡನ್ ಬಳಿ ತಿಳಿಸಿದ್ದಾರೆ. ಬಳಿಕ ಹಾಸ್ಟೆಲ್ ಸಿಬ್ಬಂದಿ ಆಕೆಯ ಕೊಠಡಿ ತೆರೆದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಆಲಮಟ್ಟಿ ಡ್ಯಾಂ ಆವರಣಕ್ಕೆ ನುಗ್ಗಿದ ಬುರ್ಖಾಧಾರಿ – ಅವಳಲ್ಲ ಅವನು
ಘಟನೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ವಿದ್ಯಾರ್ಥಿನಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಹಾಗೂ ಸಂಬಂಧಿಕರು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದ ಪ್ರದೇಶದಲ್ಲಿ ಹಿಂಸಾಚಾರ ನಡೆಯದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ.