ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ; ಮತ್ತೆ ಮೂವರು ಪೊಲೀಸರು ಅಮಾನತು

Public TV
1 Min Read
Darshan 4

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಜೈಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜೈಲರ್ ಪರಮೇಶ ನಾಯಕ್. ಅಸಿಸ್ಟೆಂಟ್ ಜೈಲರ್ ಕೆ.ಪಿ.ರಾಯಮಾನೆ ಹಾಗೂ ವಾರ್ಡರ್ ಸುದರ್ಶನ್ ಅಮಾನತಾಗಿದ್ದಾರೆ.

ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಾಗೂ ಇತರರ ಜೊತೆ ನಟ ದರ್ಶನ್ ಕುಳಿತು ಟೀ ಕುಡಿಯುತ್ತಾ, ಸಿಗರೇಟ್ ಸೇದುತ್ತಾ ಕುಳಿತಿರುವುದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಲಾಗಿದೆ ಎಂದು ವಿವಾದ ಹುಟ್ಟುಕೊಂಡಿತು.

ನಟ ದರ್ಶನ್ ಜೈಲು ಫೋಟೊ ವೈರಲ್ ಡ್ಯಾಮೇಜ್ ನಿಯಂತ್ರಣಕ್ಕೆ ಮುಂದಾದ ಸರ್ಕಾರ ಪೊಲೀಸ್ ಅಧಿಕಾರಿಗಳ ಮೇಲೆ ಗರಂ ಆಯಿತು. ಇದರ ಬೆನ್ನಲ್ಲೇ ಜೈಲಿನಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ 9 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.

ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ವಿ.ಶೇಷಮೂರ್ತಿ ಅವರೂ ಅಮಾನತುಗೊಂಡಿದ್ದರು. ಈಗ ಅವರ ಸ್ಥಾನಕ್ಕೆ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿ ಸುರೇಶ್ ನೇಮಕಗೊಂಡಿದ್ದಾರೆ.

Share This Article