ಬಳ್ಳಾರಿ: ನಿಂತಿದ್ದ ಲಾರಿಗೆ (Lorry) ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್‌ಗೇಟ್ (Jajarakal Toll) ಬಳಿ ನಡೆದಿದೆ.
ಬಳ್ಳಾರಿ (Ballari) ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ಘಟನೆ ನಡೆದಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌ವೊಂದು ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಬಂದ ಮತ್ತೊಂದು ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ತೀವ್ರತೆಗೆ ವಾಹನಗಳಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಇದನ್ನೂ ಓದಿ: ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಬೆಂಕಿ ಹೊತ್ತಿಕೊಂಡ ವೇಳೆ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕ ದೀಕ್ಷಿತ್ (28) ಹೊರಬರಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ಮುಖ್ಯ ಶಿಕ್ಷಕರ ಕಿರುಕುಳ ಆರೋಪ – ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ
