ಕೊಪ್ಪಳ: ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯೊಬ್ಬಳು (Girl) ತೀವ್ರ ಅಸ್ವಸ್ಥಳಾಗಿ ಸಾವನ್ನಪಿರುವ ಘಟನೆ ನಡೆದಿದೆ. ಕಲುಷಿತ ನೀರು (Polluted Water) ಸೇವಿಸಿ ಬಾಲಕಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ಕೊಪ್ಪಳ (Koppala) ಜಿಲ್ಲೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಕಲುಷಿತ ನೀರು ಸೇವೆನೆಯಿಂದ 15 ಕ್ಕೂ ಹೆಚ್ಚು ಜನ ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಕಿಯೂ ವಾಂತಿ-ಭೇದಿಗೆ ತುತ್ತಾಗಿದ್ದರಿಂದ ಆಕೆಯ ಸಾವು ಕಲುಷಿತ ನೀರು ಸೇವಿಸಿದ್ದರಿಂದ ಆಗಿದೆ ಎಂದು ಊಹಿಸಲಾಗಿದೆ.
Advertisement
Advertisement
ಬಾಲಕಿಗೆ ಬುಧವಾರ ರಾತ್ರಿ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಆಕೆಯನ್ನು ರಾತ್ರಿ ವೇಳೆ ಆಸ್ಪತ್ರೆಗೆ ಕರೆದೊಯ್ಯಲು ಪೋಷಕರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಗುರುವಾರ ಬೆಳಗ್ಗೆ ಆಕೆಯನ್ನು ಕುಷ್ಟಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಬಾಲಕಿ ಮನೆಯಲ್ಲಿಯೇ ತೀವ್ರವಾಗಿ ಅಸ್ವಸ್ಥಳಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸುವ ಮೊದಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: 1 ಫೋನ್ ಕರೆ.. 9 ಅಧಿಕಾರಿಗಳು..; ಒಡಿಶಾ ರೈಲು ದುರಂತದ ಬಳಿಕ ಏನೇನಾಯ್ತು? – ಇಲ್ಲಿದೆ ಪಿನ್ ಟು ಪಿನ್ ಮಾಹಿತಿ
Advertisement
Advertisement
ಗ್ರಾಮದಲ್ಲಿ ಈಗಾಗಲೇ ಹಲವರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವುದರಿಂದ ಕಲುಷಿತ ನೀರು ಸೇವನೆಯಿಂದಲೇ ವಾಂತಿ-ಭೇದಿ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಅಪಾರ ಪ್ರಮಾಣದ ಬೆಳೆ ನಾಶ