ರಾಜ್ಯಾಧ್ಯಕ್ಷರ ಸ್ಥಾನದ ಕುರಿತು ಇದೇ 20ರೊಳಗೆ ಉತ್ತರ: ವಿಜಯೇಂದ್ರ

Public TV
2 Min Read
B Y Vijayendra

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ 20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.

ತುಮಕೂರಿನಲ್ಲಿ (Tumakuru) ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯವೇ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನುಡಿದರು. ಇದನ್ನೂ ಓದಿ: ʻಉದಯಗಿರಿ ಗಲಭೆʼಯಲ್ಲಿ ಬೇಯ್ತಿದೆ ರಾಜಕೀಯ ಬೇಳೆ – ಬುರ್ಖಾ ಧರಿಸಿ ಆರ್‌ಎಸ್‌ಎಸ್‌ನಿಂದ ಕೃತ್ಯವೆಂದ ಹರಿಪ್ರಸಾದ್

Basanagouda Patil Yatnal

ಕೇಂದ್ರದ ಶಿಸ್ತು ಸಮಿತಿ ಯತ್ನಾಳರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ, ಏನಾಗುತ್ತಿದೆ ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ. ಕೇಂದ್ರದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ತಮ್ಮನ ಕೊಲೆಗೆ ಸುಪಾರಿ ಕೊಟ್ಟು ಪಾಪ ಕಳೆಯಲು ಮಹಾ ಕುಂಭಮೇಳಕ್ಕೆ ಹೋಗಿದ್ದ ಅಣ್ಣ

ಯತ್ನಾಳ್‌ರಿಗೆ ನೋಟಿಸ್ ಕೊಡಲು ತಾಕತ್ತಿಲ್ಲ ಎಂಬ ರಾಜಣ್ಣನವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ರಾಜಣ್ಣನವರು ನಮ್ಮ ಪಕ್ಷದವರಾ? ಅವರು ಕಾಂಗ್ರೆಸ್ ಪಕ್ಷದವರು. ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದರು. ಇದನ್ನೂ ಓದಿ: ಪ್ಲಾಟ್‌ಫಾರ್ಮ್‌, ರೈಲು ಹೆಸರಿನಲ್ಲಿ ಉಂಟಾದ ಗೊಂದಲವೇ ಕಾಲ್ತುಳಿತಕ್ಕೆ ಕಾರಣ: ದೆಹಲಿ ಪೊಲೀಸ್‌

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರದ ಕುರಿತು ಮಾತನಾಡಿ, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರಾದೃಷ್ಟಕರ. ಬಿಜೆಪಿ ಸರ್ಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ, 400 ಕೋಟಿ ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರ ಶೋಭೆ ತರುವುದಿಲ್ಲ. ಇದರಿಂದ ಒಳಿತಾಗುವುದಿಲ್ಲ. ಇದರಿಂದ ಮಕ್ಕಳಿಗೆ ಅನಾನುಕೂಲ ಆಗಲಿದೆ. ಮಕ್ಕಳಿಗೆ ಇವತ್ತು ಅನ್ಯಾಯ ಆಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇನ್ನಾದರೂ ರಾಜ್ಯ ಸರಕಾರ ಎಚ್ಚತ್ತುಕೊಂಡು ತನ್ನ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡ ಮೇಲಿಂದ ತಳ್ಳಿ ಪತ್ನಿಯ ಕೊಲೆಗೈದ ಭೂಪ

ಇವರ ಗ್ಯಾರಂಟಿಗಳಿಂದ ಅನುದಾನ ಹೊಂದಿಸಲು ಸಾಧ್ಯವಾಗುತ್ತಿಲ್ಲ. ಪೆಟ್ರೋಲ್ ದರ ಏರಿಸಿದರು. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದರು. ಬೇರೆಬೇರೆ ಬೆಲೆ ಏರಿಕೆ ಆಗುತ್ತಿದೆ. ಅನುದಾನ ಕೊಡಲು ಆಗದೆ ಯೂನಿವರ್ಸಿಟಿಗಳನ್ನು ಮುಚ್ಚಿಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲು ಹೊರಟಿದೆ. ಇದನ್ನು ಖಂಡಿತವಾಗಿ ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿವಿಗಳನ್ನು ಮುಚ್ಚುವುದರಿಂದ ಎಸ್ಸಿ-ಎಸ್ಟಿ, ಒಬಿಸಿ, ಮಹಿಳೆಯರಿಗೆ ಅನ್ಯಾಯವಾಗಲಿದೆ – ಬೊಮ್ಮಾಯಿ

Share This Article