ಬೆಂಗಳೂರು: PSI ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರೋ ಕಿಂಗ್‌ಪಿನ್ ಸೇರಿ ಪ್ರಮುಖ ಆರೋಪಿಗಳನ್ನು ಖೆಡ್ಡಕ್ಕೆ ಬೀಳಿಸಿದ್ದಾರೆ. ಬ್ಲೂಟೂತ್‌ನಲ್ಲಿ ಆರೋಪಿತ ಅಭ್ಯರ್ಥಿಗಳಿಗೆ ಉತ್ತರ ರವಾನಿಸಿ ಅಕ್ರಮ ಎಸಗಿರುವ ಮತ್ತೊಂದು ಸ್ಫೋಟಕ ಅಂಶ ಬಯಲಾಗಿದೆ.
Advertisement
ಸಿನಿಮಾ ಮಾದರಿಯಲ್ಲಿ ಬ್ಲೂಟೂತ್ ಮೂಲಕ ಉತ್ತರ ರವಾನಿಸಿದ್ದಾರೆ. ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಮಾಹಿತಿ ಬಹಿರಂಗಗೊಂಡಿದೆ. ಲೀಕ್ ಆದ ಪ್ರಶ್ನೆಪತ್ರಿಕೆಯ ಉತ್ತರಗಳನ್ನು ಸಿದ್ಧಪಡಿಸಿಕೊಂಡಿದ್ದ ಆರೋಪಿಗಳು ಹಣ ಕೊಟ್ಟು ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ರವಾನೆ ಮಾಡಿಸಿದ್ದಾರೆ. ದಾಳಿ ನಡೆಸಿರುವ ಅಧಿಕಾರಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಲಭ್ಯವಾಗಿದ್ದು, ಆರೋಪಿಗಳ ಎಟಿಎಂ ಕಾರ್ಡ್‌ಗಳು ಸಹ ದೊರೆತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ: ಆರ್.ಅಶೋಕ್
Advertisement
ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಉತ್ತರ ನೀಡಲಾಗಿದ್ದು, ಹಣಕೊಟ್ಟ ಅಭ್ಯರ್ಥಿಗಳಿಗೆ A-B-C-D ಮಾದರಿ ಪ್ರಶ್ನೆಪತ್ರಿಕೆಗಳಂತೆ ಒಂದೇ ಬಾರಿಗೆ ಉತ್ತರ ಹೇಳಿಕೊಟ್ಟಿದ್ದಾರೆ. ಇದೀಗ ಪ್ರಶ್ನೆ ಪತ್ರಿಕೆಗೆ ಉತ್ತರ ಕೊಡುವ ವೀಡಿಯೋ ವೈರಲ್ ಆಗಿದೆ.
Advertisement
Advertisement
PSI ಅಕ್ರಮ ನೇಮಕಾತಿ ಪ್ರಕರಣದ ರೂವಾರಿಗಳು ಸಿಐಡಿ ಖೆಡ್ಡಕ್ಕೆ ಬೀಳುತ್ತಿದ್ದಂತೆ ಉಳಿದವರಿಗೆ ನಡುಕ ಶುರುವಾಗಿದೆ. ಕಿಂಗ್‌ಪಿನ್‌ಗಳ ವಿಚಾರಣೆ ವೇಳೆ ಹೆಸರುಗಳು ಬಾಯಿಬಿಟ್ರೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂಬ ಆತಂಕ ಉಳಿದ ಆರೋಪಿಗಳಿಗೆ ಶುರುವಾಗಿದೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಆಪ್ತರೆನ್ನಲಾದ ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿದೆ: ಆರಗ
ಪ್ರಕರಣದಲ್ಲಿ ಭಾಗಿಯಾಗಿ ತಲೆಮರಿಸಿಕೊಂಡಿರೋ ಆರೋಪಿಗಳನ್ನು ಸದ್ಯದಲ್ಲೇ ಬಂಧಿಸಿ ಪ್ರಕರಣಗಳ ಸತ್ಯಾಸತ್ಯತೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಸಿಐಡಿ ತನಿಖೆ ಮುಂದುವರೆದಿದೆ.