Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

#AnswerMadiModi – ಕೇಂದ್ರ ನೀರಾವರಿ ಸಚಿವರ ಉತ್ತರಕ್ಕೆ ಸಿದ್ದರಾಮಯ್ಯ ತಿರುಗೇಟು

Public TV
Last updated: October 31, 2023 11:09 pm
Public TV
Share
4 Min Read
Siddaramaiah Gajendra Singh Shekhawat
SHARE

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ. ಜನತೆಯ ಬಾಯಾರಿಕೆಯನ್ನು ತಣಿಸಬೇಕಾದ ಕೇಂದ್ರ ಸರ್ಕಾರ ಬದಲಿಗೆ ತನ್ನ ಸುಳ್ಳುಗಳ ದಾಹ ತಣಿಸಿಕೊಳ್ಳಲು ಮುಂದಾಗಿ ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ನಡೆಸಿರುವುದು ಬೇಸರದ ಸಂಗತಿ. ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿರುವುದು ನೀವು ಮತ್ತು ನಿಮ್ಮ ಸರ್ಕಾರ ಎಂದು ಹೇಳುವ ಮೂಲಕ ಸಿದ್ದರಾಮಯ್ಯ (Siddaramaiah) ಕೇಂದ್ರ ಜಲಸಂನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರಿಗೆ ತಿರುಗೇಟು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸೋಮವಾರ ಗಜೇಂದ್ರ ಸಿಂಗ್ ಶೇಖಾವತ್‌ ಅವರು ದೀರ್ಘ ಉತ್ತರ ನೀಡಿ ಕೇಂದ್ರ ಸರ್ಕಾರದ ನಡೆಯನ್ನು ಸಮರ್ಥಿಸಿ ಸಿದ್ದು ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರು. ಇಂದು ಸಿದ್ದರಾಮಯ್ಯ ಈ ಆರೋಪಕ್ಕೆ ದೀರ್ಘ ಪೋಸ್ಟ್‌ ಪ್ರಕಟಿಸಿ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಪೋಸ್ಟ್‌ನಲ್ಲಿ ಏನಿದೆ?
ಕೇಂದ್ರದಲ್ಲಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕರ್ನಾಟಕದ ವಿರುದ್ಧ ದ್ವೇಷ ಸಾಧಿಸುವಂತೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ (Karnataka) ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಆನ್ಸರ್ ಮಾಡಿ ಮೋದಿ ಎಂಬ ಅಭಿಯಾನವನ್ನು ಪ್ರಾರಂಭಿಸಿ ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಐದು ಪ್ರಶ್ನೆಗಳನ್ನು ಕೇಳಿದ್ದೆ. ಅವುಗಳಲ್ಲಿ ಎರಡು ಪ್ರಶ್ನೆಗಳಿಗಷ್ಟೇ ಉತ್ತರಿಸಿರುವ ಸಚಿವರು ಉಳಿದಂತೆ ನೀಡಿರುವ ಉತ್ತರಗಳಿಗೂ ನಮ್ಮ ಪ್ರಶ್ನೆಗಳಿಗೂ ಸಂಬಂಧವೇ ಇಲ್ಲ.   ಇದನ್ನೂ ಓದಿ: ಅಭಿವೃದ್ಧಿ Vs ಅನುದಾನ: ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡ್ಬೇಡಿ- ಸಿದ್ದರಾಮಯ್ಯ ಸೇಡಿನ ಆರೋಪಕ್ಕೆ ಕೇಂದ್ರ ತಿರುಗೇಟು

ರಾಜ್ಯಕ್ಕೆ ಸಂಬಂಧಿಸಿದ ನೀರಾವರಿ ಯೋಜನೆಗಳು ಹೇಗೆ ಕೇಂದ್ರ ಬಿಜೆಪಿ ಸರ್ಕಾರದ ತಿರಸ್ಕಾರ, ಅವಗಣನೆಯಿಂದಾಗಿ ಧೂಳು ಹಿಡಿಯುತ್ತಿವೆ ಎನ್ನುವುದನ್ನು ಮತ್ತೊಮ್ಮೆ ವಾಸ್ತವಾಂಶಗಳ ಮೂಲಕ ನಿಮ್ಮ ಮುಂದಿರಿಸುತ್ತಿದ್ದೇನೆ. ತಾವು ವಿಷಯವನ್ನು ಸರಿಯಾಗಿ ಗ್ರಹಿಸಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯದ ಧೋರಣೆ ಮತ್ತು ಉದ್ದೇಶಪೂರ್ವಕವಾದ ಅನ್ಯಾಯವನ್ನು ಸರಿಪಡಿಸುತ್ತಿರಿ ಎಂದು ಭಾವಿಸುತ್ತೇನೆ.

siddaramaiah narendramodi delhi 1

ಕೃಷ್ಣಾ ಮತ್ತು ಕಾವೇರಿ ಎಂಬ ಎರಡು ಜೀವನದಿಗಳು ಕರ್ನಾಟಕದ ಎರಡು ಕಣ್ಣುಗಳು. ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕಾಗಿ ಕರ್ನಾಟಕ ರಾಜ್ಯಕ್ಕೆ 130 ಟಿಎಂಸಿ ನೀರು ಹಂಚಿಕೆಯಾಗಿದೆ. ಈ ಪ್ರಮಾಣದ ನೀರನ್ನು ಬಳಕೆಗೆ ಲಭ್ಯವಾಗಿಸಬೇಕೆಂದರೆ ಆಲಮಟ್ಟಿ ಜಲಾಶಯದ ಎತ್ತರವನ್ನು ಸಮುದ್ರ ಮಟ್ಟದಿಂದ ಪ್ರಸಕ್ತ ಇರುವ 519.60 ಅಡಿಯಿಂದ 524.256 ಅಡಿಗಳಿಗೆ ಏರಿಸಬೇಕಾಗಿದೆ. ಯೋಜನೆಯ ಮೂರನೇ ಹಂತದ ಅನುಷ್ಠಾನದಿಂದ ಬರಪೀಡಿತ ಉತ್ತರ ಕರ್ನಾಟಕದ 5.94 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ. ವಿಪರ್ಯಾಸವೆಂದರೆ, ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ – 2 ತೀರ್ಪು ಘೋಷಿಸಿ ಒಂದು ದಶಕವೇ ಕಳೆದರೂ ತೀರ್ಪಿನ ಗೆಜೆಟ್‌ ಸೂಚನೆಯನ್ನು ಕೇಂದ್ರ ಸರ್ಕಾರ ಹೊರಡಿಸಿಲ್ಲ. ಇದಕ್ಕಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸೂಕ್ತ ಅರ್ಜಿ ದಾಖಲಿಸುವಂತೆ ರಾಜ್ಯ ಸರ್ಕಾರವು ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದ ಹೊರತಾಗಿಯೂ ಈ ಕುರಿತು ಕೇಂದ್ರ ಮುಂದಾಗಿಲ್ಲ. ಇದು ಯೋಜನೆಯ ಜಾರಿಗೆ ತೊಡಕಾಗಿ ಪರಿಣಮಿಸಿದೆ.  ಇದನ್ನೂ ಓದಿ: ನಟ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲು

ಕಳಸಾ ಮತ್ತು ಬಂಡೂರ ಯೋಜನೆ ವಿಚಾರದಲ್ಲಿಯೂ ಕೂಡ ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ವಿವಿಧ ಅನುಮತಿಗಳನ್ನು ದೊರಕಿಸಿಕೊಡುವಲ್ಲಿ ಕೇಂದ್ರ ಸರ್ಕಾರ ಸೋತಿದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ದೊರೆಯಬೇಕಾದ ತಿರುವಳಿ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಅನುಮತಿ, 2006ರ ಇಐಎ ಅಧಿಸೂಚನೆಯಿಂದ ವಿನಾಯಿತಿ, ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಕಳಸಾ ಯೋಜನೆಗೆ ಅಗತ್ಯವಾಗಿರುವ ವನ್ಯಜೀವಿ/ಹುಲಿ ಕಾರಿಡಾರ್ ವಿಚಾರವಾಗಿ ದೊರೆಯಬೇಕಾದ‌ ಅನುಮತಿ, ಭೀಮಗಡ ವನ್ಯಜೀವಿ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತಾದ ವಿಚಾರಗಳು ಕೇಂದ್ರ ಸರ್ಕಾರದ ಕಡೆಯಿಂದ ಬಾಕಿ ಉಳಿದಿವೆ.

ಭದ್ರಾ ಮೇಲ್ದಂಡೆ ಮಧ್ಯ ಕರ್ನಾಟಕದ ಪ್ರಮುಖ ಏತ ನೀರಾವರಿ ಯೋಜನೆಯಾಗಿದ್ದು 29.90 ಟಿಎಂಸಿ ನೀರಿನ ಬಳಕೆಯೊಂದಿಗೆ ಸೂಕ್ಷ್ಮ ನೀರಾವರಿ ಯೋಜನೆ ಮೂಲಕ 2,25,515 ಹೆಕ್ಟೇರ್‌ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಯೋಜನೆಯನ್ನು ‘ರಾಷ್ಟ್ರಿಯ ಯೋಜನೆ’ ಎಂದು ಘೋಷಿಸಲು ಅಗತ್ಯವಾದ ಎಲ್ಲ ಸಕ್ಷಮ ಪ್ರಾಧಿಕಾರಿಗಳ ಅನುಮತಿ, ಅನುಮೋದನೆಗಳ ಹೊರತಾಗಿಯೂ ಕೇಂದ್ರ ಸರ್ಕಾರವು ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ ಎಂದು ಘೋಷಿಸದೆ ವಿಳಂಬ ಧೋರಣೆ ಅನುಸರಿಸುತ್ತಿದೆ. ಸದರಿ ಯೋಜನೆಗಾಗಿ 2023-24ರ ಕೇಂದ್ರ ಆಯವ್ಯಯದಲ್ಲಿ ರೂ.5,300 ಕೋಟಿ ಸಹಾಯಧನ ಘೋಷಿಸಿರುವುದರ ಹೊರತಾಗಿಯೂ ಈವರೆಗೆ ಯೋಜನೆಗೆ ಯಾವುದೇ ಸಹಾಯಧನವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ.

ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷದ ಬಗೆಗಿನ ನಮ್ಮ ಪ್ರಶ್ನೆಗೆ ಉತ್ತರಿಸಿರುವ ಸಚಿವರು ಆ ಯೋಜನೆಯ ಪ್ರಸ್ತಾವವನ್ನು ಸಭೆಯ ಅಜೆಂಡಾದಲ್ಲಿ ಸೇರಿಸಲಾಗಿತ್ತು ಎಂದು ಉತ್ತರಿಸಿದ್ದಾರೆ. ಸಭೆಯ ಅಜೆಂಡಾದಲ್ಲಿ ಸೇರಿಸುವುದಷ್ಟೇ ಪ್ರಧಾನ ಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರ ಕೆಲಸವೇ? ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವುದು ಕೂಡಾ ಪ್ರಧಾನಿ ಮತ್ತು ಸಚಿವರ ಕರ್ತವ್ಯ ಅಲ್ಲವೇ? ಈ ಕೆಲಸದಲ್ಲಿ ಇಬ್ಬರೂ ವಿಫಲವಾಗಿದ್ದಾರೆ ಎಂದು ಕನ್ನಡಿಗರಿಗೆ ಅನಿಸಿದರೆ ತಪ್ಪಾದೀತೇ? ಕಾವೇರಿ ಜಲಾನಯನ ಪ್ರದೇಶದಲ್ಲಿನ ಸಂಕಷ್ಟ ಪರಿಸ್ಥಿತಿಯ ನಿವಾರಣೆಗೆ ಮೇಕೆದಾಟು ಯೋಜನೆಯು ದೀರ್ಘಕಾಲೀನ ಶಾಶ್ವತ ಪರಿಹಾರ ಯೋಜನೆಯಾಗಿರುತ್ತದೆ. ಈ ಯೋಜನೆಯನ್ನು CWMA/CWC ಪರಿಗಣಿಸಿ ಅಗತ್ಯ ಅನುಮತಿ ಹಾಗೂ ಸಮ್ಮತಿಗಳನ್ನು ನೀಡುವ ಮೂಲಕ ಬೆಂಗಳೂರು ಮತ್ತು ಸುತ್ತಮುತ್ತಲಿನ ಊರುಗಳ ಕುಡಿಯುವ ನೀರಿನ ಸಮಸ್ಯೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರಿಹರಿಸುತ್ತದೆ ಎಂದು ನಾನು ನಂಬಿದ್ದೇನೆ.

 

 

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:congresskarnatakanarendra modiSiddramaiahಕರ್ನಾಟಕಕಾಂಗ್ರೆಸ್ನರೇಂದ್ರ ಮೋದಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Cooli Cinema
22 ಕೋಟಿ ರೂಪಾಯಿಗೆ ರಜನಿಯ ಕೂಲಿ ಸಿನಿಮಾ ಬಿಕರಿ
Cinema Latest South cinema Top Stories
Priyanka Chopra
ಬೀಚ್‌ನಲ್ಲಿ ಡೀಪ್‌ ಕಿಸ್‌ – ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ
Bollywood Cinema Latest
Vajreshwari Combines
ಪಾರ್ವತಮ್ಮ ರಾಜ್‌ಕುಮಾರ್ ಕನಸಿನ ಕೂಸಿಗೆ 50 ವರ್ಷ
Cinema Latest Sandalwood Top Stories
Darshan in Thailand 1
ದರ್ಶನ್‌ಗೆ ನೋ ಟೆನ್ಷನ್ – ಜಾಲಿ ಮೂಡಲ್ಲಿ ಥಾಯ್ಲೆಂಡ್‌ನಲ್ಲಿ ಬಿಂದಾಸ್‌ ಪಾರ್ಟಿ
Cinema Latest Sandalwood Top Stories
ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories

You Might Also Like

Imran Khan Asim Munir
Latest

ನನಗೂ ನನ್ನ ಪತ್ನಿಗೂ ಏನಾದ್ರು ಆದ್ರೆ ಅದಕ್ಕೆ ಪಾಕ್‌ ಸೇನಾ ಮುಖ್ಯಸ್ಥನೇ ಕಾರಣ: ಇಮ್ರಾನ್‌ ಖಾನ್‌ ಹೇಳಿಕೆ

Public TV
By Public TV
18 minutes ago
RB Timmapur Slams Murugesh Nirarni 6 months validity govt Comments
Bengaluru City

ಸುರ್ಜೇವಾಲಾ ನನ್ನನ್ನು ಕರೆದಿಲ್ಲ, ಸಂಪುಟದಿಂದ ಕೈ ಬಿಡ್ತಾರೆ ಅಂತನೂ ಹೇಳಿಲ್ಲ – ಆರ್.ಬಿ.ತಿಮ್ಮಾಪುರ್

Public TV
By Public TV
21 minutes ago
siddaramaiah 11
Bengaluru City

ಶಾಸಕರ ಅಸಮಾಧಾನಕ್ಕೆ ಬಗ್ಗಿದ ಸಿಎಂ – `ಕೈ’ ಶಾಸಕರಿಗೆ 50 ಕೋಟಿ ಅನುದಾನಕ್ಕೆ ಅಸ್ತು

Public TV
By Public TV
44 minutes ago
Thailand Beauty
Latest

80,000 ನಗ್ನ ಫೋಟೋಸ್‌, ಸೆಕ್ಸ್‌ ಮಾಡಿ ಬೌದ್ಧ ಬಿಕ್ಕುಗಳ ಟ್ರ್ಯಾಪ್‌ – 100 ಕೋಟಿ ಸುಲಿಗೆ ಮಾಡಿದ್ದ ಹನಿ ಲೇಡಿ ಅರೆಸ್ಟ್‌

Public TV
By Public TV
48 minutes ago
Maharashtra Islampur as Ishwarpur
Latest

ಸಾಂಗ್ಲಿಯ `ಇಸ್ಲಾಮ್‌ಪುರ’ ಈಗ `ಈಶ್ವರಪುರ’ – ಮರುನಾಮಕರಣಕ್ಕೆ `ಮಹಾ’ ಸರ್ಕಾರ ನಿರ್ಧಾರ

Public TV
By Public TV
56 minutes ago
Mangaluru Loan Fraud Arrest
Crime

ಐಷಾರಾಮಿ ಮನೆಯಲ್ಲೇ ಬಾರ್, ಮಲೇಷ್ಯಾ ಹುಡುಗಿಯರು – ಉದ್ಯಮಿಗಳಿಗೆ 200 ಕೋಟಿ ವಂಚಿಸಿದ್ದ ಕಿಂಗ್‌ಪಿನ್ ಅರೆಸ್ಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?