ಕ್ಯಾನ್ಬೆರಾ: ಆಸ್ಟ್ರೇಲಿಯಾ ನೂತನ ಪ್ರಧಾನಿಯಾಗಿ ಅಂಥೋನಿ ಎಲ್ಬನೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಜಪಾನ್‌ನಲ್ಲಿ ನಡೆಯುತ್ತಿರುವ ಟೋಕಿಯೊ ಶೃಂಗಸಭೆಗೂ ಮುನ್ನವೇ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ಎಲ್ಬನೀಸ್ ಜಯದ ಹಾದಿ ಮುಟ್ಟಿದ್ದು ಬೆಂಬಲಿಗರು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಜಪಾನ್ ಯುವಕರು ಒಮ್ಮೆಯಾದರೂ ಭಾರತಕ್ಕೆ ಭೇಟಿ ನೀಡಬೇಕು: ಮೋದಿ ಆಹ್ವಾನ
Advertisement
Advertisement
ಎಲ್ಬನೀಸ್ ಗವರ್ನರ್-ಜನರಲ್ ಡೇವಿಡ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಭದ್ರತಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಟೋಕಿಯೊಗೆ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಎಲ್ಬನೀಸ್, ನಾನು ಆಶಾವಾದದ ಭಾವನೆ ಹೊಂದಿರುವ ಸರ್ಕಾರವನ್ನು ಮುನ್ನಡೆಸಲು ಬಯಸುತ್ತೇನೆ. ಜೊತೆಗೆ ಆಸ್ಟ್ರೇಲಿಯಾ ಜನರನ್ನು ಹೆಮ್ಮೆ ಪಡುವಂತೆ ಮಾಡುತ್ತೇನೆ ಎಂದು ನೂತನ ಪ್ರಧಾನಿ ಹೇಳಿದ್ದಾರೆ.