ಮಂಗಳೂರು: ಪೌರತ್ವ ಕಾಯಿದೆಯ ವಿರುದ್ಧ ಪ್ರತಿಭಟನೆ ನಡೆದಿದ್ದು, ಈ ವೇಳೆ ಬಳಸಿದ್ದ ಕುರ್ಚಿ ಹಾಗೂ ಟೆಂಪೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿ ಸೋಮವಾರ ಸಂಜೆ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಪೌರತ್ವ ಕಾಯಿದೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಬಳಸಿದ್ದ 2,500 ಕುರ್ಚಿಗಳನ್ನು ಟೆಂಪೋ ವಾಹನದಲ್ಲಿ ತುಂಬಿಸಿಡಲಾಗಿತ್ತು. ಆದರೆ ರಾತ್ರಿ ವೇಳೆ ಯಾರೋ ದುಷ್ಕರ್ಮಿಗಳು ಈಚರ್ ಟೆಂಪೋ ಹಾಗೂ 2,500 ಕುರ್ಚಿಗಳಿಗೆ ಬೆಂಕಿ ಹಚ್ಚಿದ್ದಾರೆ.
Advertisement
ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೌರತ್ವ ಕಾಯಿದೆಯ ಪರವಾಗಿ ಇರುವವರೇ ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.