Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ವಿರುದ್ಧ ಪ್ರತಿಭಟನೆ ಕಾಂಗ್ರೆಸ್‌ನ ರಾಜಕೀಯ ಸ್ಟಂಟ್: ಬೊಮ್ಮಾಯಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರದ ವಿರುದ್ಧ ಪ್ರತಿಭಟನೆ ಕಾಂಗ್ರೆಸ್‌ನ ರಾಜಕೀಯ ಸ್ಟಂಟ್: ಬೊಮ್ಮಾಯಿ ಆರೋಪ

Bengaluru City

ಕೇಂದ್ರದ ವಿರುದ್ಧ ಪ್ರತಿಭಟನೆ ಕಾಂಗ್ರೆಸ್‌ನ ರಾಜಕೀಯ ಸ್ಟಂಟ್: ಬೊಮ್ಮಾಯಿ ಆರೋಪ

Public TV
Last updated: February 5, 2024 11:00 pm
Public TV
Share
5 Min Read
Basavaraj Bommai 1
SHARE

– ರಾಜ್ಯ ಸರ್ಕಾರ ತಪ್ಪು ಮಾಹಿತಿ ನೀಡಿ ಜನರ ದಾರಿ ತಪ್ಪಿಸುತ್ತಿದೆ

ಬೆಂಗಳೂರು: ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ರಾಜಕೀಯ ಸ್ಟಂಟ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಹಳೆ ಚಾಳಿ ಬಿಟ್ಟಿಲ್ಲ. ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ರೈತ ವಿರೋಧಿ ಸರ್ಕಾರ ರಾಜ್ಯದಲ್ಲಿದೆ. ಒಂಬತ್ತು ತಿಂಗಳಿನಿಂದ ಒಂದು ರೂ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. 14ನೇ ಹಣಕಾಸಿಗಿಂತ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಹಣ ಕಡಿಮೆ ಆಗಿದೆ ಎಂದು ಹೇಳಿದ್ದಾರೆ. 15ನೇ ಹಣಕಾಸು ಆಯೋಗದ ಸಮಿತಿ ಬಂದಾಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇತ್ತು. ಆಗ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಆಯೋಗಕ್ಕೆ ಸರಿಯಾಗಿ ಮಾಹಿತಿ ನೀಡಿಲ್ಲ. ಹೀಗಾಗಿ 15ನೇ ಹಣಕಾಸು ಆಯೋಗದಲ್ಲಿ 4.7% ನಿಂದ 3.6% ಗೆ ಕಡಿಮೆಯಾಗಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿ ದಾಟುತ್ತೆ.. ಬಿಜೆಪಿಗೆ 370 ಸೀಟು ಬರುತ್ತೆ: ಮೋದಿ ಭವಿಷ್ಯ

ಸತ್ಯ ಮುಚ್ಚಿಟ್ಟ ಸಿಎಂ:
ಯುಪಿಎ ಅವಧಿಯಲ್ಲಿ 2004-14 ರವರೆಗೆ ತೆರಿಗೆ ಮೂಲಕ 81,795 ಕೋಟಿ ಬಂದಿತ್ತು. ಎನ್‌ಡಿಎ ಅವಧಿಯಲ್ಲಿ 2,82,791 ಕೋಟಿ ರೂ. ಹಣ ಬಂದಿದೆ. ಅಭಿವೃದ್ಧಿ ಅನುದಾನ ಯುಪಿಎ ಅವಧಿಯಲ್ಲಿ 60,779 ಕೋಟಿ ರೂ. ಬಂದಿದೆ. ಮೋದಿ ಅವಧಿಯಲ್ಲಿ 2,08,882 ಕೋಟಿ ಬಿಡುಗಡೆಯಾಗಿದೆ. ಇದರ ಅವಧಿ ಇನ್ನೂ ಎರಡು ವರ್ಷ ಇದೆ. 2026 ರವರೆಗೆ 2.5 ಲಕ್ಷ ಕೋಟಿ ಮೀರಿ ತೆರಿಗೆ ಹಂಚಿಕೆ ಬರಲಿದೆ. ಇದು ಕಾಂಗ್ರೆಸ್ ನೇತೃತ್ವದ ಯುಪಿಎ ಇದ್ದಾಗ 14 ನೇ ಹಣಕಾಸಿನ ಶಿಫಾರಸಿಗಿಂತ 1,51,309 ಕೋಟಿ ರೂ.ಗಳಿಗಿಂತ ಅಧಿಕವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನಮ್ಮ 3ನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯ ದೇಶವಾಗಲಿದೆ: ಮೋದಿ ಭರವಸೆ

ಇದಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಬೇರೆ ಬೇರೆ ರೂಪದಲ್ಲಿ ಅನುದಾನ ಬರುತ್ತದೆ. ಸ್ವಾತಂತ್ರ‍್ಯ ಬಂದಾಗಿನಿಂದ 2014 ರವರೆಗೆ ರಾಜ್ಯದಲ್ಲಿ ಕೇವಲ 6 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಗಿತ್ತು. ಆದರೆ, ಮೋದಿ ಅವಧಿಯಲ್ಲಿ 2014-24ರವರೆಗೆ 13,500 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಿದೆ. ರೈಲ್ವೆ ಯೋಜನೆಗಳಿಗೆ ಯುಪಿಎ ಅವಧಿಯಲ್ಲಿ 835 ಕೋಟಿ ಬಂದಿದ್ದು. ಎನ್‌ಡಿಎ ಅವಧಿಯಲ್ಲಿ 11,000 ಕೋಟಿ ರೂ. ಬಂದಿದೆ. 2023-24ನೇ ಬಜೆಟ್‌ನಲ್ಲಿ ರಾಜ್ಯಕ್ಕೆ ರೈಲ್ವೆಗೆ 7,524 ಕೋಟಿ ರೂ. ಹಂಚಿಕೆಯಾಗಿದೆ. ರೈಲ್ವೆ ವಿದ್ಯುದೀಕರಣಕ್ಕೆ 1947 ರಿಂದ 2014 ರವರೆಗೆ ರಾಜ್ಯದಲ್ಲಿ ಕೇವಲ 16 ಕಿ.ಮೀ ಅಭಿವೃದ್ಧಿ ಆಗಿದ್ದು, ಎನ್‌ಡಿಎ ಅವಧಿಯಲ್ಲಿ 3265 ಕಿ.ಮೀ ರಾಜ್ಯದಲ್ಲಿ ರೈಲ್ವೆ ವಿದ್ಯುದೀಕರಣವಾಗಿದೆ. ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 10 ಕೋಟಿ ಕೊರೊನಾ ಉಚಿತ ಲಸಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿಯನ್ನು ಸಂಪೂರ್ಣ ಉಚಿತವಾಗಿ ನೀಡುತ್ತಿದ್ದು, ಅದೆಲ್ಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳದೆ ಮರೆಮಾಚುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: 10 ವರ್ಷಗಳಲ್ಲಿ ಬಿಜೆಪಿಯಿಂದಾದ ಅಭಿವೃದ್ಧಿ ಕೆಲಸ ಮಾಡಲು ಕಾಂಗ್ರೆಸ್‌ಗೆ 100 ವರ್ಷ ಬೇಕಾಗುತ್ತೆ: ಮೋದಿ ವ್ಯಂಗ್ಯ

ಕೆಂದ್ರದ ಸೆಸ್ ಕುರಿತು ಸಿಎಂ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಸೆಸ್ ಎನ್‌ಡಿಎ ಅವಧಿಯಲ್ಲಿ ಆರಂಭವಾಗಿಲ್ಲ. ಸ್ವಾತಂತ್ರ‍್ಯ ಬಂದಾಗಿನಿಂದಲೂ ಇದೆ. ಯುಪಿಎ ಅವಧಿಯಲ್ಲಿ ಯಾಕೆ ಅದನ್ನು ತೆಗೆದು ಹಾಕಲಿಲ್ಲ ಎಂದು ಪ್ರಶ್ನಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ 5300 ಕೋಟಿ ರೂ. ಮೀಸಲಿಟ್ಟಿದೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಬೇಕೆಂದರೆ ರಾಜ್ಯ ಸರ್ಕಾರ ಶೇ 50% ಖರ್ಚು ಮಾಡಬೇಕು. ಅಲ್ಲದೇ ಕೇಂದ್ರದ ಹಣ ಬರಬೇಕೆಂದರೆ ಸರಿಯಾದ ರೀತಿಯಲ್ಲಿ ರಾಜ್ಯದಿಂದ ಪ್ರಸ್ತಾವನೆ ಕೊಡಬೇಕು. ಕೇವಲ ಪತ್ರ ಬರೆಯುವುದರಿಂದ ಯಾವುದೇ ಕೆಲಸ ಆಗುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ.. ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ?- ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ:
ಕಾಂಗ್ರೆಸ್‌ನವರು ರಾಜ್ಯದಲ್ಲಿ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ದೆಹಲಿಯಲ್ಲಿ ಪ್ರತಿಭಟನೆ ಮಾಡುವ ರಾಜಕೀಯ ಸ್ಟಂಟ್ ಮಾಡುತ್ತಿದ್ದಾರೆ. ಫೆ.7 ರಂದು ಸಿದ್ದರಾಮಯ್ಯ ಅವರ ಸರ್ಕಾರದ ವೈಫಲ್ಯ ವಿರೋಧಿಸಿ ಬಿಜೆಪಿ ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು. ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಇವರು ತಮ್ಮ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಇನ್ನೇನು ಲೋಕಸಭೆ ಚುನಾವಣೆ ಘೋಷಣೆ ಆದರೆ ಈ ವರ್ಷ ಯಾರಿಗೂ ಅನುದಾನ ಬಿಡುಗಡೆ ಮಾಡುವುದಿಲ್ಲ. ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಬರ ಬಿದ್ದಿದ್ದು, ಇದುವರೆಗೂ ಪರಿಹಾರ ನೀಡಿಲ್ಲ. ರೈತರ ಪಾಲಿಗೆ ಈ ಸರ್ಕಾರ ಸತ್ತು ಹೋಗಿದೆ. ಈ ರೀತಿಯ ರಾಜಕೀಯ ಸ್ಟಂಟ್ ಮಾಡುವುದರಿಂದ ಹೆಚ್ಚು ಲೋಕಸಭಾ ಸ್ಥಾನ ಗೆಲ್ಲುತ್ತೇವೆ ಎಂದುಕೊಂಡರೆ ಅದು ಅವರ ಭ್ರಮೆ ಎಂದರು. ಕೇಂದ್ರದಿಂದ ಬರ ಪರಿಹಾರ ಕೊಡಿಸಲು ಬಿಜೆಪಿ ಮಾಡಿರುವ ಪ್ರಯತ್ನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಸಂಸದರು ಕೇಂದ್ರ ಸರ್ಕಾರದ ಜೊತೆಗೆ ಮಾತನಾಡಿದ್ದಾರೆ. ಶೀಘ್ರವೇ ಕೆಂದ್ರದಿಂದ ಬರ ಪರಿಹಾರ ಹಣ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಸಂಸದರು ಗಂಡಸರಲ್ಲ, ಶೋ ಪೀಸ್‌ಗಳು: ಹೆಚ್‌ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ

ಗ್ಯಾರಂಟಿ ಶ್ವೇತಪತ್ರ ಹೊರಡಿಸಲಿ:
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಿದೆ. ಗ್ಯಾರೆಂಟಿ ಯೊಜನೆಗಳು ಎಷ್ಟು ಜನರಿಗೆ ತಲುಪಿವೆ ಎಂದು ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು. ಅಲ್ಲದೇ ಸಿದ್ದರಾಮಯ್ಯ ಅವರು ಅತಿ ಹೆಚ್ಚು ಸಾಲ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಮತ್ತಷ್ಟು ಸಾಲ ಮಾಡುತ್ತಾರೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಮಾಡಿದ ಸಾಲದ ಹಣವನ್ನು ನಾವು ತೀರಿಸಿದ್ದೇವೆ ಎಂದರು. ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ತೆರಿಗೆ ಹಣ ಕಡಿಮೆಯಾಗಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿಯೇ ಅತಿಹೆಚ್ಚು ಅಕ್ರಮ ಗಣಿಗಾರಿಕೆ ನಡೆದಿದ್ದು, ಗಣಿ ಬಾಧಿತ ನಾಲ್ಕು ಜಿಲ್ಲೆಗಳ ಅಭಿವೃದ್ಧಿಗೆ 25 ಸಾವಿರ ಕೊಟಿ ರೂ. ನಾವು ತಂದಿದ್ದೇವೆ. ಅದನ್ನು ಬಳಕೆ ಮಾಡಲು ಈಗಿನ ಸರ್ಕಾರ ಯೋಜನೆ ರೂಪಿಸಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಟಿಕೆಟ್ ಗೊಂದಲ ಯಡಿಯೂರಪ್ಪ ಚರ್ಚಿಸುತ್ತಾರೆ:
ಹಾವೇರಿ ಲೋಕಸಭಾ ಟಿಕೆಟ್ ವಿಚಾರದ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಯಲ್ಲಿ ಚರ್ಚೆ ನಡೆದಿದೆ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಈಶ್ವರಪ್ಪ ಅವರೊಂದಿಗೆ ಮಾತನಾಡಿದೆ. ಅವರು ಜಗದೀಶ್ ಶೆಟ್ಟರ್ ಕೂಡಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಲ್ಲ ಅಂತ ಈಶ್ವರಪ್ಪ ಹೇಳಿದ್ದಾರೆ. ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ಅವರ ಬಳಿ ಯಾರಾದರೂ ಭೇಟಿ ಮಾಡಿ ಚರ್ಚೆ ಮಾಡಬಹುದು ಎಂದರು. ಕೆಲವರು ತಮಗೆ ಟಿಕೆಟ್ ಸಿಕ್ಕಿದೆ ಎಂದು ಹೇಳಿಕೊಳ್ಳುತ್ತಿರಬಹುದು. ಆದರೆ ಕೇಂದ್ರ ಸಮಿತಿ ಅಂತಿಮವಾಗಿ ತೀರ್ಮಾನ ಮಾಡಲಿದ್ದು, ಪ್ರಸಾದ ನಾವೇ ಪಡೆಯಲು ಸಾಧ್ಯವಿಲ್ಲ, ದೇವರು ಕೊಡಬೇಕು ಎಂದು ಮಾರ್ಮಿಕವಾಗಿ ನುಡಿದರು. ಇದನ್ನೂ ಓದಿ: ಅಯೋಧ್ಯೆ ಬಾಲರಾಮನಿಗೆ ತೊಟ್ಟಿಲು ಸೇವೆ – ರಘುಪತಿ ಭಟ್ ಕೊಡುಗೆ

TAGGED:Basavaraj Bommaibengalurubjpcongresssiddaramaiahಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood
Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories

You Might Also Like

Mexico India
Latest

ಅಮೆರಿಕ ಆಯ್ತು ಈಗ ಮೆಕ್ಸಿಕೋ – ಭಾರತದ ವಸ್ತುಗಳಿಗೆ 50% ಸುಂಕ

Public TV
By Public TV
1 hour ago
Raichur Mid Day Meal 1
Districts

ಎಸ್‍ಡಿಎಂಸಿ ಅಧ್ಯಕ್ಷ ಸಾಲ ತೀರಿಸದ್ದಕ್ಕೆ ಮಕ್ಕಳ ಬಿಸಿಯೂಟಕ್ಕೆ ಬ್ಯಾಂಕ್ ಅಡ್ಡಗಾಲು!

Public TV
By Public TV
2 hours ago
ಸಾಂದರ್ಭಿಕ ಚಿತ್ರ
Court

ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ – ಸರ್ಕಾರದ ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು

Public TV
By Public TV
2 hours ago
CKB ACCIDENT
Chikkaballapur

ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ದುರ್ಮರಣ

Public TV
By Public TV
3 hours ago
accused arrested for killing friend and taking selfie video in hassan
Crime

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌

Public TV
By Public TV
3 hours ago
Construction of illegal mosques in Bagalkote Outrage from Hindu organizations
Bagalkot

ಬಾಗಲಕೋಟೆಯಲ್ಲಿ ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?