ಟೆಹ್ರಾನ್: ಹಿಜಬ್ ವಿರೋಧಿ ಭಾರೀ ಪ್ರತಿಭಟನೆ (Anti Hijab Protest) ನಡೆಯುತ್ತಿರುವ ಇರಾನ್‌ನಲ್ಲಿ (Iran) ಮೊದಲ ಬಾರಿಗೆ ಆರೋಪಿಗೆ ಮರಣದಂಡನೆ ಶಿಕ್ಷೆ (Death Sentence) ವಿಧಿಸಲಾಗಿದೆ.
ದೇಶಲ್ಲಿ ಹಿಜಬ್ ಅನ್ನು ವಿರೋಧಿಸಿ ನಿರಂತರವಾಗಿ ಅಶಾಂತಿ ಮುಂದುವರಿದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಸಿರುವ ಆರೋಪದಲ್ಲಿ ಕೆಲವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಕ್ಲೆರಿಕಲ್ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿರುವವರನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಮೊದಲ ಬಾರಿಗೆ ಮರಣದಂಡನೆ ವಿಧಿಸಿದೆ.
Advertisement
Advertisement
ಪ್ರತಿಭಟನೆಯಲ್ಲಿ ತೊಡಗಿದ ವ್ಯಕ್ತಿಯೊಬ್ಬರು ಕಟ್ಟಡಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ಅವರಿಗೆ ಮರಣದಂಡನೆ ವಿಧಿಸಲಾಗಿದೆ. ಇನ್ನೂ 5 ಜನರಿಗೆ ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ಆರೋಪದ ಮೇಲೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಪಾಕಿಸ್ತಾನಿ ಮಹಿಳೆಯ ಹೆಸರು!
Advertisement
ಈ ತೀರ್ಪುಗಳನ್ನು ಕ್ರಾಂತಿಕಾರಿ ನ್ಯಾಯಾಲಯದ ಪ್ರತ್ಯೇಕ ಶಾಖೆಗಳು ನೀಡಿವೆ. ಆದರೆ ವಿಚಾರಣೆಯಲ್ಲಿರುವ ಪ್ರತಿಭಟನಾಕಾರರ ಬಗ್ಗೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗಿಲ್ಲ. ಅವರು ಈ ನಿರ್ಧಾರಗಳನ್ನು ಮೇಲ್ಮನವಿಗೆ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
Advertisement
ಇರಾನ್‌ನಲ್ಲಿ ಕ್ಲೆರಿಕಲ್ ಆಡಳಿತವನ್ನು ವಿರೋಧಿಸುವವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವುದಕ್ಕೆ ಹೆಸರುವಾಸಿಯಾಗಿದೆ. 1979ರಲ್ಲಿ ಇಸ್ಲಾಮಿಕ್ ಕ್ರಾಂತಿಯಾದ ಬಳಿಕ ನ್ಯಾಯಾಲಯವನ್ನು ಸ್ಥಾಪಿಸಲಾಯಿತು. ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ ನಡೆಸಿರುವ ನೂರಾರು ಜನರನ್ನು ಬಂಧಿಸಲಾಗಿದೆ. ಅವರಿಗೆ ಸಾರ್ವಜನಿಕವಾಗಿ ವಿಚಾರಣೆ ನಡೆಸುವುದಾಗಿ ತಿಳಿಸಲಾಗಿದೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಬೆಳ್ಳಂಬೆಳಗ್ಗೆ 4.1 ತೀವ್ರತೆಯ ಭೂಕಂಪ