ಶಿವಮೊಗ್ಗ: ಚುನಾವಣಾ ಫಲಿತಾಂಶ (Karnataka Election Results) ಹೊರ ಬಿದ್ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. 5 ಜನರ ವಿರುದ್ಧ ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಆಯ್ಕೆಯಾದ ನೂತನ ಕಾಂಗ್ರೆಸ್ ಶಾಸಕ ಅಜೀಜ್ ಶೇಖ್ ಸಹ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಇದನ್ನು ಅವರು ಒಪ್ಪಿಕೊಂಡಂತಾಗಿದೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದರು.
Advertisement
Advertisement
ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯನವರ ನಡುವೆ ಜಾತಿ ಲಾಬಿ ನಡೆಯುತ್ತಿದೆ. ಡಿಕೆಶಿ ಪರ ಒಕ್ಕಲಿಗರು ಮತ್ತು ಸಿದ್ದರಾಮಯ್ಯನವರ ಪರ ಕುರುಬರ ಲಾಬಿ ನಡೆಯುತ್ತಿದೆ. ಇದು ನೇರವಾಗಿ ಜಾತಿವಾದಿಗಳು ಎಂದು ಒಪ್ಪಿಕೊಂಡಂತಾಗಿದೆ. ಬಿಜೆಪಿಗೆ ಇವರು ಕೋಮುವಾದಿಗಳು ಎನ್ನುತ್ತಿದ್ದರು. ಈಗ ಅವರು ಮಾಡುತ್ತಿರುವುದು ಏನು? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಡಿಕೆಶಿಯೇ ಸಿಎಂ ಆಗಬೇಕು- ಓಲಾ, ಊಬರ್ ಚಾಲಕರ ಸಂಘಟನೆ ಆಗ್ರಹ
Advertisement
Advertisement
ಜೆಡಿಎಸ್ನ ಎಂಎಲ್ಸಿ ಭೋಜೇಗೌಡ ಬಹಿರಂಗವಾಗಿಯೇ ವ್ಯಭಿಚಾರ ನಡೆಸಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಭೋಜೇಗೌಡರು ಪ್ರಚಾರ ಮಾಡಿದ್ದಾರೆ. ಫಲಿತಾಂಶದ ನಂತರ ಕ್ಷೀರಾಭಿಷೇಕ ಮಾಡಿಸಿಕೊಂಡಿದ್ದಾರೆ. ಹೀಗಾಗಿ ಇವರ ವಿರುದ್ಧ ಏನು ಕ್ರಮ ಆಗಲಿದೆ ಕಾದು ನೋಡೋಣ ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಬಿಜೆಪಿಗೆ ದೊಡ್ಡಪೆಟ್ಟು ಬಿದ್ದಿದೆ: ಎಂ.ಪಿ ರೇಣುಕಾಚಾರ್ಯ