ಕೋಲ್ಕತ್ತಾ: ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶದ್ಯಾಂತ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಸರ್ಕಾರ ಎರಡು ದಿನಗಳ ವಿಶೇಷ ಅಧಿವೇಶನ ಕರೆದಿದ್ದು ಸದನದಲ್ಲಿ ಅತ್ಯಾಚಾರ ವಿರೋಧಿ ಮಸೂದೆಯನ್ನು (Anti-Rape Bill ) ಮಂಡಿಸಿದೆ.
ಅತ್ಯಾಚಾರ ವಿರೋಧಿ ಮಸೂದೆಯನ್ನು ರಾಜ್ಯ ಕಾನೂನು ಸಚಿವ ಮೊಲೊಯ್ ಘಾಟಕ್ ಮಂಡಿಸಿದರು. ಪ್ರಸ್ತಾವಿತ ಮಸೂದೆಯಲ್ಲಿ, ಅತ್ಯಾಚಾರ ಮತ್ತು ಬಲಿಪಶುವಿನ ಮರಣದ ತಪ್ಪಿತಸ್ಥರಿಗೆ ಮರಣ ದಂಡನೆಯನ್ನು ನೀಡಲು ಅವಕಾಶವಿದೆ. ಇದಲ್ಲದೆ, ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ತಪ್ಪಿತಸ್ಥರಿಗೆ ಜಾಮೀನು ರಹಿತ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ ಪ್ರವಾಹ; 35 ಮಂದಿ ಸಾವು
Advertisement
Advertisement
ಮಸೂದೆಯ ಮೇಲಿನ ಚರ್ಚೆಯ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ಈ ಮಸೂದೆಯನ್ನು ಐತಿಹಾಸಿಕ ಎಂದು ಬಣ್ಣಿಸಿದರು. ಅತ್ಯಾಚಾರ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು. ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಒತ್ತಾಯಿಸುವಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari) ಹೇಳಿದರು. ಇದನ್ನೂ ಓದಿ: ಫಿಲಿಪೈನ್ಸ್‌ನಲ್ಲಿ ಭಾರೀ ಮಳೆಯಿಂದ ಭೂಕುಸಿತ – 14 ಮಂದಿ ದುರ್ಮರಣ
Advertisement
ಮಸೂದೆಯನ್ನು ಬಿಜೆಪಿ ಸ್ವಾಗತಿಸಿದೆ. ಆದರೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸಹ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧವನ್ನು ಎದುರಿಸಲು ಎಲ್ಲಾ ಕಠಿಣ ನಿಬಂಧನೆಗಳನ್ನು ಹೊಂದಿದೆ ಎಂದು ಉಲ್ಲೇಖಿಸಿದೆ. ಪಕ್ಷದ ನಾಯಕ ಮತ್ತು ರಾಜ್ಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಸೂದೆಗೆ ಏಳು ತಿದ್ದುಪಡಿಗಳನ್ನು ಕೋರುವ ಪ್ರಸ್ತಾಪವನ್ನು ಮಂಡಿಸಿದರು. ಇದನ್ನೂ ಓದಿ: ಸಂಸದ ಡಾ.ಸುಧಾಕರ್ ಸತ್ಯ ಹರಿಶ್ಚಂದ್ರ ಅಲ್ಲ: ಪ್ರದೀಪ್ ಈಶ್ವರ್
Advertisement
ನಾವು ಈ ಮಸೂದೆ ಕಾನೂನಾಗಿ ತಕ್ಷಣವೇ ಜಾರಿಗೊಳಿಸಬೇಕೆಂದು ಬಯಸುತ್ತೇವೆ. ಇದು ನಿಮ್ಮ ಜವಾಬ್ದಾರಿಯಾಗಿದೆ. ನಮಗೆ ಫಲಿತಾಂಶಗಳು ಬೇಕು. ನಾವು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಮುಖ್ಯಮಂತ್ರಿಗಳು ಏನು ಬೇಕಾದರೂ ಹೇಳಬಹುದು ಆದರೆ ಈ ಮಸೂದೆಯನ್ನು ತಕ್ಷಣವೇ ಜಾರಿಗೆ ತರಲಾಗುವುದು ಎಂದು ನೀವು ಗ್ಯಾರಂಟಿ ನೀಡಬೇಕು ಎಂದು ಸುವೇಂದು ಅಧಿಕಾರಿ ಹೇಳಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ