ನವದೆಹಲಿ: ಕಳೆದ ವರ್ಷ ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಐವರು ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಆಪ್ರಾಪ್ತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಆತನನ್ನು ಜಮ್ಮುವಿನ ಆರ್‌ಎಸ್‌ಪುರದ ಬಾಲಮಂದಿರದಲ್ಲಿ ಇರಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಬಂಧಿತ ಅಪ್ರಾಪ್ತ, ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿದ್ದ ಆರೋಪಿಗಳಾದ ನಿಸಾರ್ ಅಹ್ಮದ್ ಅಲಿಯಾಸ್ ಹಾಜಿ ನಿಸಾರ್ ಮತ್ತು ಮುಷ್ತಾಕ್ ಹುಸೇನ್ ಅಲಿಯಾಸ್ ಚಾಚಾ ಎಂಬ ಇಬ್ಬರ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: 9,999 ವಜ್ರಗಳಿಂದ ರಾಮಮಂದಿರದ ಕಲಾಕೃತಿ ರಚಿಸಿದ ಕಲಾವಿದ!
ಹಾಜಿ ನಿಸಾರ್ ಮತ್ತು ಚಾಚಾ ಈ ಇಬ್ಬರು ಆರೋಪಿಗಳು ಎರಡು ತಿಂಗಳಿಗೂ ಹೆಚ್ಚಿನ ಕಾಲ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು. ಅಲ್ಲದೇ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ನಿರ್ವಾಹಕರಾದ ಸೈಫುಲ್ಲಾ ಅಲಿಯಾಸ್ ಸಾಜಿದ್ ಜುಟ್ ಮತ್ತು ಅಬು ಕತಾಲ್ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement
- Advertisement
ಭಯೋತ್ಪಾದಕ ದಾಳಿ ನಡೆದ ಬಳಿಕ ಎನ್‍ಐಎ ಅಧಿಕಾರಿಗಳ ತಂಡ ಆರೋಪಿಗಳ ಪತ್ತೆಗೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ, ಪೂಂಚ್ ಮತ್ತು ರಿಯಾಸಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶದಲ್ಲಿ ಹಲವಾರು ತಿಂಗಳುಗಳ ಕಾಲ ಅಲ್ಲಿಯೇ ಬೀಡುಬಿಟ್ಟಿತ್ತು.
2023ರ ಜ.1 ರಂದು ನಡೆದಿದ್ದ ಈ ಭಯೋತ್ಪಾದಕ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ ಮಾಡಿದ ಇಸ್ರೋ