ಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆ (Bhavani Revanna) ಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠವು, ಭವಾನಿ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ. ಇದನ್ನೂ ಓದಿ: ಇಂದು ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯ – ಕೋರ್ಟ್ ಮುಂದೆ ಹಾಜರು
Advertisement
Advertisement
85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.
Advertisement
Advertisement
ಅಕ್ಕ ಬಟ್ಟೆ, ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ಪೀಠವು ಇದೇ ಸಂದರ್ಭದಲ್ಲಿ ಉಲ್ಲೇಖಿಸಿತು. ಇದನ್ನೂ ಓದಿ: ದರ್ಶನ್ ಮನೆ ತೂಗುದೀಪ ನಿವಾಸಕ್ಕೂ ಸಂಚಕಾರ