ಟೈಗರ್ ನಾಗೇಶ್ವರ್ ರಾವ್ ಅಂಗಳಕ್ಕೆ ಅನುಪಮ್ ಖೇರ್ ಎಂಟ್ರಿ

Public TV
1 Min Read
Anupam Kher

ತೆಲುಗಿನ ಮಾಸ್ ಮಹಾರಾಜ ರವಿತೇಜ (Raviteja) ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ‘ಟೈಗರ್ ನಾಗೇಶ್ವರ್ ರಾವ್’ (Tiger Nageshwar Rao) ಅಂಗಳಕ್ಕೆ ಬಾಲಿವುಡ್ ದಿಗ್ಗಜ ಅನುಪಮ್ ಖೇರ್ ಎಂಟ್ರಿಯಾಗಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಅನುಪಮ್ ಖೇರ್ (Anupam Kher) ಅವರ ಪಾತ್ರ ಹಾಗೂ ಲುಕ್ (First Look) ಪರಿಚಯಿಸಿದೆ. ಗುಪ್ತಚರ ಇಲಾಖೆಯ ಅಧಿಕಾರಿ ರಾಘವೇಂದ್ರ ರಜಪುತ್ ಪಾತ್ರದಲ್ಲಿ ಅನುಪಮ್ ಖೇರ್ ನಟಿಸುತ್ತಿದ್ದು, ಇದೇ 17ರಿಂದ ಶೂಟಿಂಗ್ ಅಖಾಡಕ್ಕೆ ಇಳಿಯಲಿದ್ದಾರೆ.

Tiger Nageshwar Rao 2

70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದು, ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ.

Web Stories

Share This Article