ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣ ಪ್ರೇಕ್ಷಕರಿಗಾಗಿ ಹೊತ್ತು ತರುತ್ತಿದೆ. ಸಾಮಾನ್ಯ ಗೃಹಿಣಿಯ ಅಸಾಮಾನ್ಯ ಕಥೆಯನ್ನು ಹೇಳಲು ಬರುತ್ತಿದ್ದಾರೆ ಅನುಪಮ (Anupama). ವಿಭಿನ್ನ ಕಥಾ ಹಂದರವುಳ್ಳ ನಮ್ಮಲಚ್ಚಿ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ಜೇನುಗೂಡು, ಕಥೆಯೊಂದು ಶುರುವಾಗಿದೆ ಹೀಗೆ ಅನೇಕ ಧಾರಾವಾಹಿಗಳನ್ನು (Serial) ಕನ್ನಡಿಗರಿಗೆ ನೀಡಿರುವ ಸ್ಟಾರ್ ಸುವರ್ಣ ಇದೀಗ ಇಡೀ ದೇಶದ ಹೃದಯ ಗೆದ್ದ ಗೃಹಿಣಿಯ ಕಥೆಯನ್ನು ಹೇಳಲು ಮುಂದಾಗಿದೆ.
Advertisement
ಮಧ್ಯ ವಯಸ್ಕ ಮಹಿಳೆ ಅನುಪಮ. ಸದಾ ಮನೆಯವರ ಬಗ್ಗೆ ಕಾಳಜಿ, ಕುಟುಂಬದವರ ಇಷ್ಟ-ಕಷ್ಟ, ಬೇಕು-ಬೇಡಗಳನ್ನು ಅರ್ಥ ಮಾಡಿಕೊಂಡು ಮನೆಯ ಗೃಹಲಕ್ಷ್ಮಿಯಂತಿರುವ (Grilahakshmi) ಈಕೆಗೆ ಮದುವೆಯಾಗಿ ಎರಡು ದಶಕಗಳ ಮೇಲಾಗಿದೆ. ತಾಯಿ, ಹೆಂಡತಿ. ಮಗಳು, ಸೊಸೆ ಎಲ್ಲಾ ರೀತಿಯ ಪಾತ್ರಗಳನ್ನು ನಿಭಾಯಿಸುವ ಈಕೆಗೆ 3 ಮಕ್ಕಳು, ಗಂಡನಿಗೆ ಈಕೆ ಓದಿಲ್ಲ, ಹಳೆಯ ಕಾಲದವಳು ಎಂಬ ತಾತ್ಸಾರ. ಮನೆಯಲ್ಲಿ ಏನೇ ತಪ್ಪುಗಳಾದರು ಅತ್ತೆ ದೂಷಿಸುವುದು ಈಕೆಯನ್ನೇ. ಶರವೇಗದಲ್ಲಿ ಬದಲಾಗುತ್ತಿರುವ ಕಾಲ, ಆಧುನಿಕ ಯುಗಕ್ಕೆ ಹೊಂದಿಕೊಂಡಿರುವ ಕುಟುಂಬದಲ್ಲಿ ಅನುಪಮ ಯಾವ ರೀತಿ ತನ್ನ ಅಸ್ಥಿತ್ವವನ್ನು ಉಳಿಸಿಕೊಂಡು, ಸಂತೋಷ ಕಂಡುಕೊಳ್ಳುತ್ತಾಳೆ ಎಂಬುದೇ ಈ ಧಾರಾವಾಹಿಯ ಮುಖ್ಯ ಕಥಾ ಹಂದರ. ಇದನ್ನೂ ಓದಿ: ಹೃತಿಕ್ ರೋಷನ್- ಸಬಾ ಆಜಾದ್ ಮದುವೆ ನಿಜಾನಾ? ರಾಕೇಶ್ ರೋಷನ್ ಸ್ಪಷ್ಟನೆ
Advertisement
Advertisement
ದೇಶದ ನಂ.1 ಧಾರಾವಾಹಿ ಎಂಬ ಪಟ್ಟವನ್ನು ಅಲಂಕರಿಸಿರುವ “ಅನುಪಮ” ಇದೀಗ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ಕನ್ನಡದಲ್ಲಿ ಬರ್ತಿರೋದಕ್ಕೆ ಪ್ರೇಕ್ಷಕರು ಖುಷಿ ಪಡುತ್ತಿದ್ದಾರೆ. ಹೊಚ್ಚ ಹೊಸ ಧಾರಾವಾಹಿ “ಅನುಪಮ” ನಿಮ್ಮ ಮಧ್ಯಾಹ್ನದ ಮನರಂಜನೆಯಲ್ಲಿ ಇದೇ ಮಾರ್ಚ್ 6 ರಿಂದ ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ. ಬದಲಾದ ಸಮಯದಲ್ಲಿ “ಅನುರಾಗ ಅರಳಿತು” ಮಾರ್ಚ್ 6 ರಿಂದ ಮಧ್ಯಾಹ್ನ 2 ಗಂಟೆಗೆ ಪ್ರಸಾರವಾಗಲಿದೆ.