ಮುಂಬೈ: ಫೆಬ್ರವರಿ 14 ಪ್ರೇಮಿಗಳ ದಿನ ಇರುವ ಕಾರಣ ಹಲವು ಪ್ರೇಮಿಗಳು ತಮ್ಮ ಸಂಗಾತಿಗಳಿಗೆ ವಿಶೇಷ ಗಿಫ್ಟ್ ನೀಡಲು ಸಿದ್ಧತೆ ನಡೆಸಿದ್ದಾರೆ. ಇತ್ತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ವ್ಯಾಲೆಟೈನ್ಸ್ ವೀಕ್ ಆರಂಭ ಮಾಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟೂರ್ನಿಯಿಂದ ವಿಶ್ರಾಂತಿ ಪಡೆದಿರುವ ನಾಯಕ ಕೊಹ್ಲಿ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಫೋಟೋದಲ್ಲಿ ಇಬ್ಬರು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಿರುವ ರೊಮ್ಯಾಂಟಿಕ್ ಸನ್ನಿವೇಶವನ್ನು ಕಾಣಬಹುದಾಗಿದೆ.
— Virat Kohli (@imVkohli) February 1, 2019
ಡಿಸೆಂಬರ್ 11, 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ ಆಸ್ಟ್ರೇಲಿಯಾದಲ್ಲಿ ತಮ್ಮ ಮೊದಲ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿತ್ತು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂಸತ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಸದಾ ಹಂಚಿಕೊಳ್ಳುತ್ತಿದ್ದಾರೆ. ನ್ಯೂಜಿಲೆಂಡ್ ಟೂರ್ನಿಯ ವೇಳೆಯೂ ಕೂಡ ಅನುಷ್ಕಾ ಶರ್ಮಾ ತಮ್ಮ ಕೆಲ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದರು.
ಟೀಂ ಇಂಡಿಯಾ ತಂಡ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕೆ ಸಿದ್ಧತೆ ನಡೆಸಿದೆ. ಇತ್ತ ಈ ವರ್ಷ ಝೀರೋ ಸಿನಿಮಾದಲ್ಲಿ ಶಾರುಖ್ ಖಾನ್ ರೊಂದಿಗೆ ಜನರ ಮುಂದೆ ಬಂದಿದ್ದ ಅನುಷ್ಕಾ ಶರ್ಮಾ ಅವರ ಚಿತ್ರ ಅಭಿಮಾನಿಗಳನ್ನು ರಂಜಿಸಲು ವಿಫಲವಾಗಿತ್ತು. ಇಬ್ಬರು ತಮ್ಮ ತಮ್ಮ ವೃತ್ತಿ ಜೀವನದಲ್ಲಿ ಬ್ಯುಸಿ ಆಗಿದ್ದರೂ, ಸಮಯ ಸಿಕ್ಕಾಗಲೆಲ್ಲಾ ಖಾಸಗಿ ಜೀವನವನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
https://www.instagram.com/p/BtXrAUvnfQ0/
https://www.instagram.com/p/BtC0N6VhEf_/
Away we go ❤️????#travelswithher pic.twitter.com/KnDhMbAG3G
— Virat Kohli (@imVkohli) January 29, 2019
https://www.instagram.com/p/BsDanxrAiiI/
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv