ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಮದುವೆಯಾಗಿ 1 ವರ್ಷವಾಗುತ್ತಿದ್ದು, ಅಭಿಮಾನಿಗಳು ಅನುಷ್ಕಾಗೆ ನೀವೂ ಪ್ರೆಗ್ನೆಂಟ್ ಆಗಿದ್ದೀರಾ ಎಂದು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಅನುಷ್ಕಾ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಅನುಷ್ಕಾ ಶರ್ಮಾ ಈ ನಡುವೆ ತಮ್ಮ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಚಿತ್ರದ ಪ್ರಮೋಶನ್‍ಗೆಂದು ಬಂದಾಗ ಮಾಧ್ಯಮದವರು ನೀವು ಗರ್ಭಿಣಿಯೇ ಎಂದು ಪ್ರಶ್ನಿಸಿದ್ದಾರೆ.
Advertisement
ಈ ಪ್ರಶ್ನೆಗೆ, ನಿಮಗೆ ಈ ರೀತಿಯ ಸುದ್ದಿಗಳು ಹೇಗೆ ಬರುತ್ತೆ ಎಂಬುದು ನನಗೆ ಗೊತ್ತಿಲ್ಲ. ಇದು ಕೆಲಸಕ್ಕೆ ಬಾರದ ಮಾತುಗಳು. ನೀವು ಮದುವೆಯನ್ನು ಅಡಗಿಸಬಹುದು. ಆದರೆ ಪ್ರೆಗ್ನೆನ್ಸಿಯನ್ನು ಹೇಗೆ ಅಡಗಿಸುತ್ತೀರಾ ಎಂದು ಅನುಷ್ಕಾ ಶರ್ಮಾ ಖಡಕ್ ಆಗಿ ಅನುಷ್ಕಾ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Advertisement
ಹಲವು ನಟಿಯರಿಗೆ ಈ ರೀತಿ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ನನಗೆ ಇಂತಹ ಸುದ್ದಿ ಮುಖ್ಯವಾಗುವುದಿಲ್ಲ. ಇಲ್ಲಿ ಜನರು ಮದುವೆ ಮೊದಲೇ ನಿಮ್ಮನ್ನು ಮುತ್ತೈದೆ ಮಾಡುತ್ತಾರೆ. ಮಗು ಆಗುವ ಮೊದಲೇ ತಾಯಿ ಮಾಡುತ್ತಾರೆ. ನನಗೆ ಇದರಲ್ಲಿ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ. ಈ ರೀತಿಯ ಸುದ್ದಿ ಕೇಳಿ ನನಗೆ ನಗು ಬರುತ್ತೆ ಎಂದು ಹೇಳಿದ್ದಾರೆ.
Advertisement
ಅನುಷ್ಕಾ ಶಾರೂಕ್ ನಟನೆಯ ‘ಝೀರೋ’ ಚಿತ್ರದ ನಂತರ ಯಾವುದೇ ಚಿತ್ರವನ್ನು ಒಪ್ಪಿಕೊಂಡಿಲ್ಲ. ಅನುಷ್ಕಾ ಗರ್ಭಿಣಿಯಾಗಿರುವ ಕಾರಣ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಸ್ವತಃ ಅನುಷ್ಕಾ ಈ ವಿಷಯಕ್ಕೆ ಪೂರ್ಣ ವಿರಾಮ ಹಾಕಿದ್ದಾರೆ.
ಕಳೆದ ವರ್ಷದ ಡಿಸೆಂಬರ್ 11ರಂದು ಇಟಲಿಯ ಟಸ್ಕನಿ ನಗರದ `ಬೋಗೋ ಫಿನೊಕಿಯೆಟೊ’ ಎಂಬ ದುಬಾರಿ ರೆಸಾರ್ಟ್‍ನಲ್ಲಿ ದ್ರಾಕ್ಷಿ ಹಣ್ಣಿನ ತೋಟದ ನಡುವೆ ಇರುವ ಸ್ವರ್ಗದಂಥಹ ತಾಣದಲ್ಲಿ ವಿರಾಟ್ ಹಾಗೂ ಅನುಷ್ಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv