ಬಾಹುಬಲಿ ಪ್ರಭಾಸ್ (Prabhas) ಮತ್ತು ಅನುಷ್ಕಾ ಶೆಟ್ಟಿ (Anushka Shetty) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 6 ವರ್ಷಗಳ ನಂತರ ಡಾರ್ಲಿಂಗ್ ಪ್ರಭಾಸ್ ಮತ್ತು ಸ್ವೀಟಿ ಮತ್ತೆ ತೆರೆಯ ಮೇಲೆ ಜೋಡಿಯಾಗಿ ಬರುತ್ತಿದ್ದಾರೆ. ಹೊಸ ಸಿನಿಮಾ ಮಾಡುವ ಮೂಲಕ ಸದ್ದು ಮಾಡ್ತಿದ್ದಾರೆ.ಇದನ್ನೂ ಓದಿ:ವದಂತಿಗೆ ಬ್ರೇಕ್, ಕಡೆಗೂ ಸ್ನೇಹಿತ್ ಜೊತೆ ಕಾಣಿಸಿಕೊಂಡ ವಿನಯ್
ಸದ್ದಿಲ್ಲದೇ ಪ್ರಭಾಸ್ (Prabhas) ಸಿನಿಮಾದಲ್ಲಿ ಅನುಷ್ಕಾ ನಟಿಸುತ್ತಿದ್ದಾರೆ. ಒಡಿಶಾದಲ್ಲಿ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ರಮ್ಯಾಕೃಷ್ಣ (Ramyakrishna) ಕೂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಇನ್ನೂ ಹೆಸರಿಡದ ಹೊಸ ಚಿತ್ರದಲ್ಲಿ ಕರಾವಳಿ ನಟಿ ಬಣ್ಣಹಚ್ಚಿದ್ದಾರೆ. ಈ ಚಿತ್ರವನ್ನು ಪ್ರಭಾಸ್ ಹೋಂ ಬ್ಯಾನರ್ ಯುವಿ ಕ್ರಿಯೇಷನ್ಸ್ ಸಂಸ್ಥೆ ನಿರ್ಮಾಣ ಮಾಡ್ತಿದೆ ಎನ್ನಲಾಗಿದೆ. ಶೀಘ್ರದಲ್ಲೇ ಈ ಸಿನಿಮಾ ಅಧಿಕೃತವಾಗಿ ಘೋಷಣೆ ಆಗಲಿದೆ. ಇನ್ನೂ 10 ದಿನಗಳ ಕಾಲ ಅನುಷ್ಕಾ ಶೆಟ್ಟಿ ಹಾಗೂ ರಮ್ಯಾಕೃಷ್ಣ ಭಾಗದ ಚಿತ್ರೀಕರಣ ಒಡಿಶಾದಲ್ಲಿ ಶೂಟಿಂಗ್ ನಡೆಯಲಿದೆ. ಈ ಸಿನಿಮಾ ಬಗ್ಗೆ ಯಾವುದೇ ವಿಚಾರ ಲೀಕ್ ಆಗಬಾರದು ಎನ್ನುವ ಕಾರಣಕ್ಕೆ ಚಿತ್ರತಂಡ ಶೂಟಿಂಗ್‌ಗೆ ಭಾರೀ ಭದ್ರತೆ ವಹಿಸಿದ್ದಾರೆ.
ಎರಡು ದಿನಗಳ ಹಿಂದೆ ಒಡಿಶಾದಲ್ಲಿ ಚಿತ್ರೀಕರಣಕ್ಕೆ ಹೋಗುವಾಗ ಮಾಸ್ಕ್ ಧರಿಸಿ ಕಾಣಿಸಿಕೊಂಡಿದ್ದ ಅನುಷ್ಕಾ ಶೆಟ್ಟಿ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸ್ವೀಟಿಯನ್ನು ನೋಡಲು ಹೋಟೆಲ್ ಬಳಿ ಜಮಾಯಿಸಿದ್ದರು. 2017ರಲ್ಲಿ ಬಾಹುಬಲಿ- 2ನಲ್ಲಿ ಪ್ರಭಾಸ್- ಅನುಷ್ಕಾ ಶೆಟ್ಟಿ ಕಡೆಯದಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಹೊಸ ಸಿನಿಮಾಗಾಗಿ ಜೊತೆಯಾಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಅಂದಹಾಗೆ, ಮಲಯಾಳಂನಲ್ಲಿ ‘ಕಥನಾರ್’ ಎನ್ನುವ ಚಿತ್ರದಲ್ಲಿ ಕೂಡ ಅನುಷ್ಕಾ ನಟಿಸಿದ್ದಾರೆ. ಆ ಸಿನಿಮಾ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರುವಾಗಿದೆ.