ಇತ್ತೀಚೆಗಷ್ಟೇ ಘಾಟಿ ಸಿನಿಮಾದ (Ghaati Movie) ಮೂಲಕ ಸೌಂಡ್ ಮಾಡಿದ್ದ ಅನುಷ್ಕಾ ಶೆಟ್ಟಿ (Anushka Shetty) ಇದೀಗ ಸೋಶಿಯಲ್ ಮೀಡಿಯಾ ಫಾಲೋವರ್ಸ್‍ಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಿಂದ (Social Media) ದೂರಾಗುವ ಬಗ್ಗೆ ಹ್ಯಾಂಡ್‍ರೈಟ್ ಲೆಟರ್ ಬರೆದಿದ್ದು, ಕಾರಣ ಏನು ಅನ್ನೋದನ್ನೂ ಅವರೇ ಹಂಚಿಕೊಂಡಿದ್ದಾರೆ.
ಬೇರೆ ನಟಿಯರಿಗೆ ಹೋಲಿಸಿದರೆ ಅನುಷ್ಕಾ ಶೆಟ್ಟಿ ಸೋಶಿಯಲ್ ಮೀಡಿಯಾಗಳಿಂದ ಅಂತರ ಕಾಯ್ದುಕೊಂಡೇ ಬಂದವರು. ಸಿನಿಮಾಗೆ ಸಂಬಂಧಪಟ್ಟ ಮಾಹಿತಿಯನ್ನಷ್ಟೇ ಆಗಾಗ ಹಂಚಿಕೊಳ್ಳುತ್ತಿದ್ದರು. ವೈಯಕ್ತಿಕ ಪೋಸ್ಟ್ ಹಾಕುವುದು ವಿರಳಾತಿವಿರಳ. ಇದೀಗ ಸೋಶಿಯಲ್ ಮೀಡಿಯಾದಿಂದ ದೂರಾಗುವ ಕುರಿತು ಮಾಹಿತಿ ಹಂಚಿಕೊಂಡಿರುವ ಅನುಷ್ಕಾ “ಸೋಶಿಯಲ್ ಮೀಡಿಯಾದಿಂದ ಸ್ವಲ್ಪ ದೂರ ಸರಿಯುತ್ತಿದ್ದೇನೆ. ಮೊಬೈಲ್ ಸ್ಕ್ರೋಲಿಂಗ್ ಹೊರತಾಗಿಯೂ ಜಗತ್ತಿನ ಜೊತೆ ಸಂಪರ್ಕ ಸಾಧಿಸಬೇಕಾಗಿದೆ.” ಶೀಘ್ರದಲ್ಲೇ ಮತ್ತೆ ನಿಮ್ಮೊಂದಿಗೆ ಸೇರಿಕೊಳ್ಳುತ್ತೇನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
ಸಾಮಾನ್ಯವಾಗಿ ಅನುಷ್ಕಾ ಸಿನಿಮಾದ ಹೊರತಾಗಿ ಹೆಚ್ಚು ಸುದ್ದಿಯಾಗೋದಿಲ್ಲ. ಇದೀಗ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದೂ ಅಪರೂಪವಾಗಿದೆ. ಮತ್ತೆ ಪ್ರಭಾಸ್ ಜೊತೆ ಜೋಡಿಯಾಗಿ ನಟಿಸುವ ಸುದ್ದಿ ಕೇಳಿಬರುತ್ತಿದೆ. ಆದರೆ ಅಂಥಹ ಯಾವ ಪ್ರಾಜೆಕ್ಟ್ ಕೂಡ ಮುನ್ನಲೆಗೆ ಬಂದಿಲ್ಲ. ಇದೀಗ ಸೋಶಿಯಲ್ ಮೀಡಿಯಾದಿಂದ ಕೊಂಚ ಬ್ರೇಕ್ ತೆಗೆದುಕೊಳ್ಳುವ ನಿರ್ಧಾರವನ್ನು ಅವರು ಘೋಷಿಸಿದ್ದಾರೆ. ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ