ಚಂಡೀಗಢ: ಯಾವುದೇ ಧರ್ಮದ ಬಗ್ಗೆ ಅಗೌರವವನ್ನು ತೋರಿದರೆ ಸಹಿಸುವುದಿಲ್ಲ ಎಂದು ಹೇಳುವ ಮೂಲಕ ಹೋಶಿಯಾರ್‍ಪುರದಲ್ಲಿ ನಡೆದ ಗೋವುಗಳ ಹತ್ಯೆಯನ್ನು ಪಂಜಾಬ್‍ನ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಖಂಡಿಸಿದ್ದಾರೆ.
ಹೋಶಿಯಾರ್‍ಪುರದಿಂದ ಸುಮಾರು 36 ಕಿಮೀ ದೂರದಲ್ಲಿರುವ ಜಾನ್ಸ್ ಹಳ್ಳಿಯ ಸಮೀಪದಲ್ಲಿರುವ ರೈಲ್ವೆ ಹಳಿ ಬಳಿ ಶನಿವಾರ ಬೆಳಗ್ಗೆ ಸುಮಾರು 19 ಹಸುಗಳ ಮೃತದೇಹಗಳು ಪತ್ತೆಯಾಗಿವೆ.
Advertisement
Advertisement
ಈ ಕುರಿತಂತೆ ಪ್ರತಿಕ್ರಿಯಿಸಿದ ಭಗವಂತ್ ಮಾನ್ ಅವರು, ಯಾವುದೇ ಬೆಲೆ ತೆತ್ತಾದರೂ ಪಂಜಾಬ್‍ನಲ್ಲಿ ಶಾಂತಿ ಮತ್ತು ಸಹೋದರತ್ವ ಹದಗೆಡಲು ನಾವು ಬಿಡುವುದಿಲ್ಲ. ಪಂಜಾಬ್‍ನಲ್ಲಿ ಶಾಂತಿ ಕದಡುವ ಸಮಾಜ ವಿರೋಧಿಗಳ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ರಾಜ್ಯದಲ್ಲಿ ಶಾಂತಿ ಮತ್ತು ಭ್ರಾತೃತ್ವವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.
Advertisement
ಘಟನೆಯ ತನಿಖೆಗಾಗಿ ಪಂಜಾಬ್ ಗೋವು ಸೇವಾ ಆಯೋಗವು ದ್ವಿಸದಸ್ಯ ಸಮಿತಿಯನ್ನು ರಚಿಸಿದ್ದು, ಈ ವಿಚಾರವಾಗಿ ಏಳು ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್
Advertisement
ಪೊಲೀಸ್ ವರಿಷ್ಠಾಧಿಕಾರಿ (ತನಿಖೆ) ಮುಖ್ತಿಯಾರ್ ರೈ ಅವರು, ಜಾನ್ಸ್ ಹಳ್ಳಿಯ ಸಮೀಪದಲ್ಲಿ ರೈಲ್ವೇ ಹಳಿ ಬಳಿ ಕೈಬಿಟ್ಟ ಸ್ಥಳದಲ್ಲಿ ತಲೆ ಇಲ್ಲದ ಕನಿಷ್ಠ 19 ಹಸುಗಳ ಶವಗಳು ಪತ್ತೆಯಾಗಿದ್ದು, ಜೊತೆಗೆ ಆಲೂಗಡ್ಡೆ ತುಂಬಿದ ಸುಮಾರು 12 ಗೋಣಿ ಚೀಲಗಳು ಬಿದ್ದಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 122 ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಭಗವಂತ್ ಮಾನ್
ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಹಸುಗಳನ್ನು ಮತ್ತು ಆಲೂಗಡ್ಡೆ ತುಂಬಿದ ಗೋಣಿ ಚೀಲಗಳನ್ನು ಎಸೆದಿದ್ದಾರೆ. ಗೋಹತ್ಯೆ ಮಾಡಿದ ಬಳಿಕ ಅವುಗಳ ಚರ್ಮವನ್ನು ತೆಗೆದುಕೊಂಡು ಹೋಗಿದ್ದಾರೆ. ನಂತರ ಬೆಳಗ್ಗೆ ಸ್ಥಳೀಯರು ಹಸುಗಳು ಸತ್ತಿರುವುದನ್ನು ಕಂಡು ತಾಂಡಾ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.